ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗಡಿಯಲ್ಲಿ ಪಾಕ್‌ನಿಂದ ಗುಂಡಿನ ದಾಳಿ: ಓರ್ವ ನಾಗರಿಕ ಸಾವು

ಜಮ್ಮು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಪಾಕ್ ಸೈನಿಕರ ಗುಂಡಿನ...

ಭಾರತೀಯ ಸೇನೆ
Vishwanath S
Updated On : 4 Aug 2015, 4:04 am

ಜಮ್ಮು: ಜಮ್ಮು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.

ಪಾಕಿಸ್ತಾನದ ಸೈನಿಕರು ಬೆಳಗಿನ ಜಾವ 5.30ರ  ವೇಳೆಗೆ ಅಪ್ರಚೋದಿತರಾಗಿ ನಡೆಸಿದ ಈ ದಾಳಿಗೆ ಭಾರತದ ಸೈನಿಕರು ಗುಂಡಿನಿಂದಲೇ ಮಾರುತ್ತರ ನೀಡಿದರು. ಗುಂಡಿನ ಚಕಮಕಿ ವೇಳೆ  ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಬಿಎಸ್‌ಎಫ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಯುವಕನನ್ನು ಸಂಜಯ್‌ ಕುಮಾರ್‌ ಎಂದು ಗುರುತಿಸಲಾಗಿದ್ದು, ಗುಂಡಿನ ಚಕಮಿಕಿಯಲ್ಲಿ ಯಾವ ಭಾರತೀಯ ಯೋಧರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement