ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಬುಧವಾರ ಗಡಿ ರಕ್ಷಣಾ ಪಡೆ(ಬಿಎಸ್‌ಎಫ್)ಯ ಮೇಲೆ ಉಗ್ರರು ದಾಳಿ ಮಾಡಿದ್ದು, ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಿರುವ ಬಿಎಸ್‌ಎಫ್ ಯೋಧರು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್‌ಎಫ್ ಕಾವಲುಪಡೆಯ ಮೇಲೆ ನಾಲ್ವರು ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಬಿಎಸ್‌ಎಫ್ ಯೋಧ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಈ ದಾಳಿಯಲ್ಲಿ ಆರು ಬಿಎಸ್‌ಎಫ್ ಯೋಧರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.