ನವದೆಹಲಿ: ಉಧಂಪುರದಲ್ಲಿ ನಡೆದ ಯೋಧರು ಉಗ್ರರು ನಡುವೆ ನಡೆದ ಗುಂಡಿನ ಕಾಳಗ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಜಮ್ಮುಕ-ಕಾಶ್ಮೀರದ ಪುಲ್ವಾಮದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಜಮ್ಮ-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿರುವ ಅಸ್ತಾನ್ ಮೊಹಲ್ಲಾ ಪ್ರದೇಶಕ್ಕೆ ನುಗ್ಗಿರುವ ಉಗ್ರರು ಸ್ಥಳದಲ್ಲಿದ್ದವರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಉಗ್ರರ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸುತ್ತುವರೆದಿರುವ ಭಾರತೀಯ ಭದ್ರತಾ ಪಡೆಗಳ ಸೇನೆ ಇದೀಗ ಉಗ್ರರ ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.