ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ತಮ್ಮ ವಾಗ್ಧಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇದೀಗ ಸುಷ್ಮಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಸೋನಿಯಾ ಗಾಂಧಿ ಅವರು ನಿಮ್ಮ ಹಾಗೆ ಕಳ್ಳರಿಗೆ ಸಹಾಯ ಮಾಡುತ್ತಿರಲಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಸಂಸತ್ತು ಅಧಿವೇಶನದ ವೇಳೆ ಲಲಿತ್ ಮೋದಿ ಪ್ರಕರಣ ಸಂಬಂಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸ್ಪಷ್ಟನೆ ನೀಡಿದ್ದ ಸುಷ್ಮಾ ಸ್ವರಾಜ್ ಅವರು ಲಲಿತ್ ಮೋದಿ ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು ಹೀಗಾಗಿ ಅವರಿಗೆ ವೀಸಾ ನೀಡಲಾಗಿತ್ತು. ನನ್ನ ಸ್ಥಾನದಲ್ಲಿ ಸೋನಿಯಾ ಗಾಂಧಿ ಇದ್ದಿದ್ದರೆ ಏನು ಮಾಡುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಯನ್ನು ಸಾಯಲು ಬಿಟ್ಟುಬಿಡುತ್ತಿದ್ದರೇ ಎಂದು ಭಾವನಾತ್ಮಕವಾಗಿ ಸೋನಿಯಾಗೆ ಪ್ರಶ್ನೆ ಹಾಕಿದ್ದರು.
ಸುಷ್ಮಾ ಸ್ವರಾಜ್ ನೀಡಿದ್ದ ಹೇಳಿಕೆ ಇಂದು ಪ್ರತಿಕ್ರಿಯೆ ನೀಡಿರುವ ರಾಹುಲ್, ಸೋನಿಯಾ ಗಾಂಧಿ ಅವರು ನಿಮ್ಮ ಹಾಗೆ ಕಳ್ಳರಿಗೆ ನೆರವು ನೀಡುತ್ತಿರಲಿಲ್ಲ. ಕಳ್ಳರು ಯಾವಾಗಲೂ ಕಳ್ಳರಿಗೆ ನೆರವು ನೀಡುತ್ತಾರೆ ಎಂದು ಹೇಳಿದ್ದಾರೆ.