ಯಾಕೂಬ್ ಮೆಮನ್ 
ದೇಶ

ಯಾಕೂಬ್ ಗೆ ಗಲ್ಲು: ನ್ಯಾ.ದೀಪಕ್ ಮಿಶ್ರಾಗೆ ಜೀವ ಬೆದರಿಕೆ; ಬಿಗಿ ಭದ್ರತೆ

ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು...

ನವದೆಹಲಿ: ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಅವರಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿನ್ನಲೆಯಲ್ಲಿ ಅವರ ನಿವಾಸ ಸುತ್ತಾಮುತ್ತಾ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ರಚನೆ ಮಾಡಿದ್ದ ತ್ರಿ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿದ್ದರು. ಈ ತ್ರಿ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ಯಾಕೂಬ್ ಗಲ್ಲು ಶಿಕ್ಷೆಗೆ ತಡೆ ನೀಡುವ ಅರ್ಜಿಯ ವಿಚಾರಣೆಯನ್ನು ತಡರಾತ್ರಿ ಕೋರ್ಟ್‌ನಲ್ಲಿ ನಡೆಸಿ, ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಲಾಗಿತ್ತು.

ಅಲ್ಲದೇ, ತ್ರಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿಗೂ ಕೂಡ ಬಿಗಿ ಭದ್ರತೆ ಒದಗಿಸಲಾಗಿದ್ದು. ಹಾಗೇ, ಪತ್ರವನ್ನು ಯಾರು ಬರೆದಿರಬಹುದು? ಎಂಬುದುರ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT