ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ (ಸಂಗ್ರಹ ಚಿತ್ರ) 
ದೇಶ

ಬಂಧನದ ಭಯ: ಔರಂಗಾಬಾದ್ ಹೋಟೆಲ್ ನಲ್ಲಿದ್ದಾರಂತೆ ರಾಧೆ ಮಾ?

ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ರಾಧೆ ಮಾ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲ ಬಂಧನದ ಭಯದಲ್ಲಿರುವ ಸ್ವಯಂ ಘೋಷಿತ ದೇವ ಮಹಿಳೆ ಇದೀಗ ರಹಸ್ಯ ಸ್ಥಳದಲ್ಲಿ ಅಡಗಿಕೊಂಡಿರುವುದಾಗಿ ತಿಳಿದುಬಂದಿದೆ...

ಮುಂಬೈ: ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ರಾಧೆ ಮಾ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲ ಬಂಧನದ ಭಯದಲ್ಲಿರುವ ಸ್ವಯಂ ಘೋಷಿತ ದೇವ ಮಹಿಳೆ ಇದೀಗ ರಹಸ್ಯ ಸ್ಥಳದಲ್ಲಿ ಅಡಗಿಕೊಂಡಿರುವುದಾಗಿ ತಿಳಿದುಬಂದಿದೆ.

ರಾಧೆ ಮಾ ವಿರುದ್ಧ ಇದೀಗ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಧೆ ಮಾಗಾಗಿ ಹುಡುಕಾಟ ಆರಂಭಿಸಿದ್ದಾರೆ. ಹೀಗಾಗಿ ಬಂಧನದ ಭಯದಲ್ಲಿರುವ ಅವರು ಔರಂಗಾಬಾದ್ ಖಾಸಗಿ ಹೋಟೆಲ್ ವೊಂದರಲ್ಲಿ ಅಡಗಿ ಕುಳಿತಿದ್ದಾರೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ ಅವರ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರಲ್ಲದೇ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ನನ್ನ ಇದೀಗ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ನನ್ನ ಪೋಷಕರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಇದರಲ್ಲಿ ರಾಧೆ ಮಾ ಅವರ ಕೈ ವಾಡಿದೆ ಎಂದು ಮಹಿಳೆಯೊಬ್ಬರು ಮುಂಬೇ ನ ಬೊರಿವಲಿ ಕ್ಷೇತ್ರದ ಠಾಣೆಯಲ್ಲಿ ರಾಧೆ ಮಾ ವಿರುದ್ಧ ಬುಧವಾರ ಪ್ರಕರಣ ದಾಖಲಿಸಿದ್ದರು.

ನಿನ್ನೆಯಷ್ಟೇ ಮಿನಿಸ್ಕರ್ಟ್ ಧರಿಸಿರುವ ರಾಧೆ ಮಾ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವಲ್ಲದೇ, ಫೋಟೋ ಕುರಿತಂತೆ ಹಲವು ವಿರೋಧಗಳು ವ್ಯಕ್ತವಾಗಿದ್ದವು. ಇದೀಗ ರಾಧೆ ಮಾ ವಿರುದ್ಧ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಾಧೆ ಮಾಗಾಗಿ ಹುಡುಕಾಟ ನಡೆಸಿದ್ದು, ಬಂಧನದ ಭಯದಿಂದಾಗಿ ರಾಧೆ ಮಾ ಕಣ್ಮರೆಯಾಗಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ