ಸಾಂದರ್ಭಿಕ ಚಿತ್ರ 
ದೇಶ

ಮೀಟರ್ ಬಡ್ಡಿ: 1,031 ಪ್ರಕರಣ, 515 ಬಂಧನ

ರೈತರ ಆತ್ಮಹತ್ಯೆಗೆ ಕಾರಣರಾಗುತ್ತಿರುವ ಖಾಸಗಿ ಲೇವಾದೇವಿದಾರರ ವಿರುದ್ಧ ಕರ್ನಾಟಕ ಸರ್ಕಾರ ಇದುವರೆಗೆ 1,031ಪ್ರಕರಣಗಳನ್ನು ದಾಖಲಿಸಿದೆ...

ನವದೆಹಲಿ: ರೈತರ ಆತ್ಮಹತ್ಯೆಗೆ ಕಾರಣರಾಗುತ್ತಿರುವ ಖಾಸಗಿ ಲೇವಾದೇವಿದಾರರ ವಿರುದ್ಧ ಕರ್ನಾಟಕ ಸರ್ಕಾರ ಇದುವರೆಗೆ 1,031ಪ್ರಕರಣಗಳನ್ನು ದಾಖಲಿಸಿದೆ. 515 ಮಂದಿಯನ್ನು ಬಂಧಿಸಿದೆ ಎಂದು ರಾಜ್ಯಸಭೆಗೆ ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಸಾಲದ ಹೊರೆ ತಾಳಲಾರದೆ 184 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವ ಮೋಹನ್ ಭಾಯ್  ಕುಂಡಾರಿ ಲಿಖಿತ ಉತ್ತರದ ಮೂಲಕ ತಿಳಿಸಿದ್ದಾರೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಅಂದರೆ 152 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನಲ್ಲಿ 20 ಮತ್ತು ಮೇನಲ್ಲಿ 12 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆಗೆ ಸಾಲದ ಹೊರೆಯೇ ಕಾರಣ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ಲೇವಾ ದೇವಿಗಾರ ನಿಯಂತ್ರಣ, ಬೆಂಬಲ ಬೆಲೆ, ಸಾಲ ಮನ್ನಾ ಸೇರಿದಂತೆ ರೈತರ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಆತ್ಮಹತ್ಯೆ ಹಾದಿ ಹಿಡಿದಿರುವ ಕರ್ನಾಟಕದ ನೆರವಿಗೆ ಕೇಂದ್ರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಸಚಿವರು  ರೈತರ ಕೃಷಿ ಉತ್ಪಾದನೆ  ಹೆಚ್ಚಳ, ಮಾರುಕಟ್ಟೆ ವ್ಯವಸ್ಥೆ, ಸಾಲದ ಪ್ರಮಾಣ ಹೆಚ್ಚಳದಂತಹ ಸಮಗ್ರ ಸ್ವರೂಪದ ಮಧ್ಯಪ್ರವೇಶದಿಂದ  ಇಂತಹ ಪರಿಸ್ಥಿತಿ ನಿಭಾಯಿಸಲು ಸಾಧ್ಯ ಎಂದು ಸರ್ಕಾರ ಭಾವಿಸಿದೆ. ಕೃಷಿ ಮತ್ತು ಕೃಷಿ ಸಾಲ ರಾದ್ಯದ ವಿಷಯಗಳು, ಕೃಷಿ ವಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಕರ್ನಾ ಟಕ ಸರ್ಕಾರ ಜಿಲ್ಲೆ ಮತ್ತು ಉಪ ವಿಭಾಗ ಮಟ್ಟದಲ್ಲಿ ಸಮಿತಿ ರಚಿಸಿ ಕರ್ನಾಟಕ  ಮನಿ ಲಾಂಡರಿಂಗ್ ಆ್ಯಕ್ಟ್, ಚಿಟ್  ಫಂಡ್ ಆ್ಯಕ್ಟ್ ಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದು, 515 ಜನರನ್ನು ಬಂಧಿಸಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!