ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಬಿಹಾರ ರಾಜ್ಯಪಾಲ ನೇಮಕಾತಿ ಬಗ್ಗೆ ನನ್ನ ಅಭಿಪ್ರಾಯ ಕೇಳಿಲ್ಲ: ನಿತೀಶ್ ಕುಮಾರ್

ರಾಮ್ ನಾಥ್ ಕೋವಿಂದ್ ಬಿಹಾರದ ಹೊಸ ರಾಜ್ಯಪಾಲರಾಗಿ ಆಯ್ಕೆಯಾಗಿರುವ ಕುರಿತಂತೆ ನನಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಯಾರೊಬ್ಬರು ನನ್ನ ಅಭಿಪ್ರಾಯವನ್ನೇ ಕೇಳಿಲ್ಲ ಎಂದು...

ನವದೆಹಲಿ: ರಾಮ್ ನಾಥ್ ಕೋವಿಂದ್ ಬಿಹಾರದ ಹೊಸ ರಾಜ್ಯಪಾಲರಾಗಿ ಆಯ್ಕೆಯಾಗಿರುವ ಕುರಿತಂತೆ ನನಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಯಾರೊಬ್ಬರು ನನ್ನ ಅಭಿಪ್ರಾಯವನ್ನೇ ಕೇಳಿಲ್ಲ ಎಂದು ಹೇಳುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲ ನೇಮಕಾತಿ ಬಗ್ಗೆ ತಮ್ಮ ಅಸಮಾಧಾನವನ್ನು ಶನಿವಾರ ಹೊರಹಾಕಿದ್ದಾರೆ....

ಬಿಹಾರ ರಾಜ್ಯದ ಹೊಸ ರಾಜ್ಯಪಾಲರಾಗಿ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರ ರಾಜ್ಯಪಾಲರ ನೇಮಕ ಮಾಡುವಾಗ ಗೃಹ ಸಚಿವರೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಯ ಅಭಿಪ್ರಾಯ ಕೇಳುತ್ತಿತ್ತು. ಆದರೆ, ಇದೀಗ ನಮ್ಮ ಸಲಹೆಯನ್ನು ಕೇಳದೆ ರಾಜ್ಯಪಾಲರ ನೇಮಕ ಮಾಡಲಾಗಿದೆ. ರಾಜ್ಯಪಾಲರ ನೇಮಕ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ. ಮಾಧ್ಯಮಗಳ ಸುದ್ದಿಯಿಂದ ನನಗೆ ಮಾಹಿತಿ ತಿಳಿಯಿತು ಎಂದು ಹೇಳಿದ್ದಾರೆ.

ಇನ್ನು ಕೆಲವೇ ತಿಂಗಳಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ರಾಜ್ಯಪಾಲರ ಅವಶ್ಯಕವಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಿಹಾರ ರಾಜ್ಯಕ್ಕೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದೆ. 69 ವರ್ಷದ ರಾಮ್ ನಾಥ್ ಕೋವಿಂದ್ ಅವರು 1994-2006ರ ಅವಧಿಯಲ್ಲಿ ಉತ್ತರ ಪ್ರದೇಶದಿಂದ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಿಜೆಪಿ ಪರಿಶಿಷ್ಟ ಮೋರ್ಚಾದ ಮುಖ್ಯಸ್ಥ ರಾಗಿರುವ ಕೋವಿಂದ್ ವೃತ್ತಿಯಲ್ಲಿ ವಕೀಲರಾಗಿ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!