ದೇಶ

ಯಾಕೂಬ್ ಗೆ ಗಲ್ಲು: ನ್ಯಾಯಾಧೀಶರಿಗೆ ಬುಲೆಟ್ ಪ್ರೂಫ್ ಕಾರು

Mainashree

ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಯಾಕೂಬ್ ಮೆಮನ್, ಗಲ್ಲುಶಿಕ್ಷೆ  ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿದ್ದು, ನಿವಾಸದ ಸುತ್ತಾಮುತ್ತಾ ಕೇಂದ್ರ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ.

ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಈ ಹಿನ್ನಲೆಯಲ್ಲಿ ಮಿಶ್ರಾ ಅವರಿಗೆ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿದ್ದು, ನಿವಾಸ ಸುತ್ತಾಮುತ್ತಾ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ರಚನೆ ಮಾಡಿದ್ದ ತ್ರಿ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿದ್ದರು. ಈ ತ್ರಿ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ಯಾಕೂಬ್ ಗಲ್ಲು ಶಿಕ್ಷೆಗೆ ತಡೆ ನೀಡುವ ಅರ್ಜಿಯ ವಿಚಾರಣೆಯನ್ನು ತಡರಾತ್ರಿ ಕೋರ್ಟ್‌ನಲ್ಲಿ ನಡೆಸಿ, ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಲಾಗಿತ್ತು.

ಅಲ್ಲದೇ, ತ್ರಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿಗೂ ಕೂಡ ಬಿಗಿ ಭದ್ರತೆ ಒದಗಿಸಲಾಗಿದ್ದು. ಹಾಗೇ, ಪತ್ರವನ್ನು ಯಾರು ಬರೆದಿರಬಹುದು? ಎಂಬುದುರ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

SCROLL FOR NEXT