ರಾಧೆ ಮಾ (ಟ್ವಿಟರ್ ಚಿತ್ರ) 
ದೇಶ

ವರದಕ್ಷಿಣೆ ಕಿರುಕುಳ: ರಾಧೆ ಮಾಗೆ ಸಮನ್ಸ್ ಜಾರಿ

ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ವಿವಾದಾತ್ಮಕ ದೇವ ಮಹಿಳೆ ರಾಧೆ ಮಾಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಮುಂಬೈ: ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ವಿವಾದಾತ್ಮಕ ದೇವ ಮಹಿಳೆ ರಾಧೆ ಮಾಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದಿಂದ ಹೊರಗಿದ್ದ ದೇಹ ಮಹಿಳೆ ರಾಧೆ ಮಾ ನಿನ್ನೆ ಮುಂಬೈಗೆ ಆಗಮಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

'ಕಳೆದ ರಾತ್ರಿ ರಾಧೆ ಮಾಗೆ ಸಮನ್ಸ್ ಜಾರಿ ಮಾಡಲಾಗಿದೆ. ಶುಕ್ರವಾರ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು' ಎಂದು ಕಂಡಿವಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಕುಂದ್ ಪವಾರ್ ಅವರು ತಿಳಿಸಿದ್ದಾರೆ.

ರಾಧೆ ಮಾ ಈಗ ನಗರಕ್ಕೆ ಆಗಮಿಸಿದ್ದು, ದಕ್ಷಿಣ ಮುಂಬೈಯಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಕಂಡಿವಲಿಯ 32 ವರ್ಷದ ಮಹಿಳೆಯೊಬ್ಬರು, ವರದಕ್ಷಿಣಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಧೆ ಮಾ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಪತಿ ಮತ್ತು ಆತನ ಮನೆಯವರು ಪತ್ನಿಗೆ ಕಿರುಕುಳ ನೀಡುವಲ್ಲಿ ರಾಧೆ ಮಾ ಕೈವಾಡವಿದೆ ಎನ್ನಲಾಗಿದ್ದು, ಈ ಆರೋಪದಡಿ ರಾಧೆ ಮಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇದೇ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಆರು ಮಂದಿಗೆ ಸಮನ್ಸ್ ನೀಡಿದ್ದು, ಇಂದು ಆ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ