ದೇಶ

ವಾಹನ ಚಾಲನೆ: ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕ್ರಮ

Rashmi Kasaragodu

ನವದೆಹಲಿ/ಮುಂಬೈ: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪ್ರಕರಣವೊಂದರ ವಿಚಾರಣೆ ವೇಳೆ, ದೆಹಲಿ ಹೈಕೋರ್ಟ್ ಕುಡಿದು ವಾಹನ ಚಲಾಯಿಸುವವರನ್ನು
`ಆತ್ಮಾಹುತಿ ಬಾಂಬರ್' ಎಂದಿದ್ದರೆ, ಮತ್ತೊಂದೆಡೆ ಕೇಂದ್ರ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಶಿಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ದೇಶದಲ್ಲಿ ಸಂಚಾರ ಶಿಸ್ತು ಮೂಡಿಸಲು ಮುಂದಾಗಿದೆ. ನಟ ಸಲ್ಮಾನ್ ಖಾನ್ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದರ ವಿಚಾರಣೆ ನಡೆಸುತ್ತಿರುವ ಬಾಂಬೆ ಹೈಕೋರ್ಟ್ ಮುಂದೆ ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಐಪಿಸಿ ಸೆಕ್ಷನ್ 304 ಎ(ನಿರ್ಲಕ್ಷ್ಯದಿಂದ ಸಾವಿಗೆ ಕಾರಣನಾಗುವುದು), 279 (ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ)ಗೆ ತಿದ್ದುಪಡಿ ತಂದು ಶಿಕ್ಷೆ ಮತ್ತು ದಂಡದ ಪ್ರಮಾಣ ಹೆಚ್ಚಿಸಲು ರಾಜ್ಯಗಳೊಂದಿಗೆ ಸಮಾಲೋಚಿಸಲಾಗಿದೆ ಎಂದು ಹೇಳಿದೆ. ಈ ನಡುವೆ ಅರ್ಜಿಯೊಂದಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್, ಕುಡಿದು ವಾಹನ ಚಲಾಯಿಸುವವರು ಆತ್ಮಹತ್ಯಾ ಬಾಂಬರ್ ಇದ್ದಂತೆ ಎಂದು ಅಭಿಪ್ರಾಯಪಟ್ಟಿದೆ.

SCROLL FOR NEXT