ಅರುಣ್ ಜೇಟ್ಲಿ(ಸಂಗ್ರಹ ಚಿತ್ರ)
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜಿಎಸ್‍ಟಿ (ಸರಕು ಮತ್ತು ಸೇವಾ ತೆರಿಗೆ) ತಿದ್ದುಪಡಿ ವಿಧೇಯಕವನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿತು.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವಿಧೇಯಕ ಮಂಡನೆ ವೇಳೆ ಪ್ರತಿಪಕ್ಷಗಳ ಸಚಿವರು ಪ್ರತಿಭಟನೆ ನಡೆಸಿದರು. ಇದರಿಂದ ಕೋಪಗೊಂಡ ಜೇಟ್ಲಿ ಅವರು ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ತಡೆಯೊಡ್ಡುತ್ತಿದೆ. ಹೀಗಾಗಿ ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಜಿಎಸ್‍ಟಿ ಮಸೂದೆ ಮಂಡನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದರು.
ಕಾಂಗ್ರೆಸ್ ಸದಸ್ಯರ ತೀವ್ರ ಗದ್ದಲ ಹಿನ್ನೆಲೆಯಲ್ಲಿ ರಾಜ್ಯಸಭಾ ಕಲಾಪವನ್ನು ನಾಳೆ ಮುಂದೂಡಿಕೆ ಮಾಡಲಾಗಿದೆ.
ಕಳೆದ ಅಧಿವೇಶನದ ಸಮಯದಲ್ಲೇ ಲೋಕಸಭೆಯಲ್ಲಿ ಜಿಎಸ್‍ಟಿ ಮಸೂದೆ ಅಂಗೀಕೃತವಾಗಿ ರಾಜ್ಯಸಭೆ ಬಂದಿತ್ತು. ರಾಜ್ಯಸಭೆಯಲ್ಲಿ ಸೆಲೆಕ್ಟ್ ಕಮ್ಯೂಟಿಗೆ ಪರಮಾರ್ಶಿಸಲು ಕಳುಹಿಸಲಾಗಿತ್ತು. ರಾಜ್ಯಸಭೆ ಸೆಲೆಕ್ಟ್ ಕಮ್ಯೂನಿಟಿ ತಿಳಿಸಿದಂತೆ ತಿದ್ದುಪಡಿ ಹೊಂದಿರುವ ಮಸೂದೆಯನ್ನು ಅರುಣ್ ಜೇಟ್ಲಿ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು.
ಜಿಎಸ್‍ಟಿ ತಿದ್ದುಪಡಿ ಮಸೂದೆಗೆ ಈಗಾಗಲೇ ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಬೆಂಬಲ ಸೂಚಿಸಿವೆ.