ನವದೆಹಲಿ: ಟೆಲಿಫೋನ್ ಎಕ್ಸ್‍ಚೇಂಜ್ ಪ್ರಕರಣದಲ್ಲಿ ಜಾಮೀನು ನಿರಾಕರಿಸಿ, ಇನ್ನು 3 ದಿನಗಳಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದ ಮದ್ರಾಸ್ ಹೈಕೋರ್ಟ್ ನ ನಿರ್ಧಾರದ ವಿರುದ್ಧ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾರನ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ , ಮಾರನ್ ಅವರ ಜಾಮೀನು ಅರ್ಜಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಬುಧವಾರ ಅರ್ಜಿ ವಿಚಾರಣೆ ನಡೆಯಲಿದೆ.