ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ 
ದೇಶ

ಆಗಸ್ಟ್ 23 ರಂದು ಭಾರತಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನ ಭದ್ರತಾ ಸಲಹೆಗಾರ

ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಆಗಸ್ಟ್ 23 ಭಾರತಕ್ಕೆ ಭೇಟಿ ನೀಡಲಿದ್ದಾರೆ.

ನವದೆಹಲಿ: ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಆಗಸ್ಟ್ 23 ಭಾರತಕ್ಕೆ ಭೇಟಿ ನೀಡಲಿದ್ದು, ಭಾರತ- ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ ನಡೆಯಲಿದೆ.

ಇಸ್ಲಾಮಾಬಾದ್ ನಲ್ಲಿ ಸುದ್ದಿಗೋಠಿಯನ್ನುದ್ದೇಶಿಸಿ ಮಾತನಾಡಿದ ಸರ್ತಾಜ್ ಅಜೀಜ್, ಆಗಸ್ಟ್ 23 ರಂದು ಭಾರತಕ್ಕೆ ಭೇಟಿ ನೀಡುವುದನ್ನು ಸ್ಪಷ್ಟಪಡಿಸಿದ್ದಾರೆ. ಪಾಕ್- ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ಮಾತುಕತೆ ನಡೆಸಲು ಕಳೆದ ತಿಂಗಳು ಭಾರತ ಸರ್ಕಾರ ತೀರ್ಮಾನಿಸಿತ್ತು. ಆದರೆ ಪಾಕಿಸ್ತಾನ ಈ ವರೆಗೂ ದಿನಾಂಕವನ್ನು ಸ್ಪಷ್ಟಪಡಿಸಿರಲಿಲ್ಲ.

ಪ್ರಧಾನಿ ನರೇಂದ್ರ ಮೋದಿ- ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಮಾತುಕತೆ ವೇಳೆ ನಿಗದಿಯಾದಂತೆ ಭಾರತದ ಸಲಹೆಗಾರ ಅಜಿತ್ ದೋವೆಲ್  ಪಾಕಿಸ್ತಾನದ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಕುರಿತ   ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎಂಬ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ