ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ(ಸಾಂಕೇತಿಕ ಚಿತ್ರ) 
ದೇಶ

ಮಹಿಳಾ ಪ್ರತ್ಯೇಕತಾವಾದಿ ಸಂಘಟನೆಯಿಂದ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶನ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾದಿನ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ.

ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾದಿನ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ. ದುಕ್ತಾರನ್ ಇ ಮಿಲ್ಲತ್ ಎಂಬ ಮಹಿಳಾ ಮೂಲಭೂತವಾದಿ ಸಂಘಟನೆ ಕಾಶ್ಮೀರದಲ್ಲಿ ಪಾಕ್ ನ ಧ್ವಜಾರೋಹಣ ಮಾಡಿದೆ.

ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ನೇತೃತ್ವದ ತಂಡವೊಂದು ಬಾಚ್ಪೋರಾ ಪ್ರದೇಶದಲ್ಲಿ ಪಾಕಿಸ್ತಾನ ಧ್ವಜವನ್ನು ಹಾರಿಸಿದ್ದು ಪಾಕ್ ರಾಷ್ಟ್ರಗೀತೆಯನ್ನು ಹಾಡಲಾಗಿದೆ.   ಕಳೆದ 2 ದಶಕಗಳಿಂದ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಧ್ವಜ ಹಾರಿಸುವುದು ತೀವ್ರಗೊಂಡಿದೆ.

1990 ರ ದಶಕದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನಂತಹ ಉಗ್ರ ಸಂಘಟನೆಗಳು ಪಾಕಿಸ್ತಾನ ಧ್ವಜಾರೋಹಣ ಮಾಡುತ್ತಿದ್ದವು. ಈಗ ಪ್ರತ್ಯೇಕತಾವಾದಿಗಳು ಪಾಕ್ ನ ಧ್ವಜಾರೋಹಣ ಮಾಡುತ್ತಿದ್ದಾರೆ. ಪಾಕಿಸ್ತಾನ ದಿನಾಚರಣೆ ವೇಳೆ ಕಾಶ್ಮೀರದಲ್ಲಿ ಪಾಕ್ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!