ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ರಾಜಕೀಯ ಮಾತನಾಡುವ ದಿನವಲ್ಲ ಇದು: ರಾಹುಲ್ ಗಾಂಧಿ

ರಾಜಕೀಯವಾಗಿ ಮಾತನಾಡುವ ದಿನವಲ್ಲ ಇದು, ಈ ಬಗ್ಗೆ ನಾಳೆ ಚರ್ಚೆ ನಡೆಸೋಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ರಾಜಕೀಯವಾಗಿ ಮಾತನಾಡುವ ದಿನವಲ್ಲ ಇದು, ಈ ಬಗ್ಗೆ ನಾಳೆ ಚರ್ಚೆ ನಡೆಸೋಣ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ನಂತರ ಮಾಧ್ಯಮಗಳೊಂದಿಗೆ ಮೋದಿ ಭಾಷಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದು ರಾಜಕೀಯ ಮಾತನಾಡುವ ದಿನವಲ್ಲ. ರಾಜಕೀಯವನ್ನು ನಾಳೆ ಮಾತನಾಡೋಣ. ಇಂದ ದೇಶದಲ್ಲಿ ಪ್ರತಿಯೊಬ್ಬರೂ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಮೋದಿ ಭಾಷಣವೊಂದು ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಗೆ ಸಲಹೆ ನೀಡಿದಂತಿದೆ. ಭ್ರಷ್ಟಚಾರಿ ವ್ಯಕ್ತಿಯೊಬ್ಬ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಸಲಹೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

69ನೇ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಇಂದು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆಸಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾವು ಜಾತಿಯತೆ ಮತ್ತು ಕೋಮುವಾದವನ್ನು ಹಿಮ್ಮೆಟ್ಟಿಸಬೇಕಾಗಿದೆ. ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಎಂದಿಗೂ ಸ್ಥಳವಿಲ್ಲ. ದೇಶದಲ್ಲಿ ಒಂದೇ ಜನಾದೇಶವಿದೆ. ಎಲ್ಲ ವ್ಯವಸ್ಥೆ ಯೋಜನೆ ಬಡವರಿಗೆ ಉಪಯೋಗವಾಗಬೇಕು.

ಭಾರತದ ಜನಮನದಲ್ಲಿ ಸರಳತೆ ತುಂಬಿದೆ. ಬಡವರನ್ನು ಗಮನದಲ್ಲಿಟ್ಟು ಯೋಜನೆ ರೂಪಿಸಲಾಗುತ್ತಿದೆ. ದೇಶದ ಮೂಲೆಮೂಲೆಗೂ ಸರ್ಕಾರದ ಸೌಲಭ್ಯ ಸಿಗುತ್ತಿದೆ. ಕಪ್ಪುಹಣ ವಾಪಸ್ ತರಲು ಈಗಾಗಲೇ ಹಲವು ದೇಶಗಳೊಂದಿಗೆ ಚರ್ಚೆನಡೆಸಿದ್ದೇವೆ. ಕಪ್ಪು ಹಣ ತಡೆಗೆ ಕಠಿಣ ಕಾನೂನುಗಳನ್ನು ರೂಪಿಸಿದ್ದೇವೆ. ಆದರೆ, ನಾವು ರೂಪಿಸಿದ ಕಾನೂನಿಗೆ ಹಲವರು ವಿರೋಧ ವ್ಯಕ್ತಪಡಿಸಿದರು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!