ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ (ಸಾಂದರ್ಭಿಕ ಚಿತ್ರ) 
ದೇಶ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

ದೇಶದಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಘಳನ್ನು ಗಣನೀಯ ಪ್ರಮಾಣದಲ್ಲಿ ಇಳಿಕೆ ಮಾಡಿದ್ದು, ಪೆಟ್ಲೋಲ್ ಹಾಗೂ ಡೀಸೆಲ್ ಬೆಲೆಯನ್ನು ಅನುಕ್ರಮವಾಗಿ ಲೀಟರಿಗೆ 1.27 ಹಾಗೂ 1.17 ರುಪಾಯಿಗಳಷ್ಟು ತಗ್ಗಿಸಿರುವುದಾಗಿ ಭಾರತೀಯ ತೈಲ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್...

ನವದೆಹಲಿ: ದೇಶದಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಗಣನೀಯ ಪ್ರಮಾಣದಲ್ಲಿ ಇಳಿಕೆ ಮಾಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಅನುಕ್ರಮವಾಗಿ ಲೀಟರಿಗೆ 1.27 ಹಾಗೂ 1.17 ರುಪಾಯಿಗಳಷ್ಟು ತಗ್ಗಿಸಿರುವುದಾಗಿ ಭಾರತೀಯ ತೈಲ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಶನಿವಾರ ಹೇಳಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿರುವುದರಿಂದ ಆಗಸ್ಟ್‌ ತಿಂಗಳಲ್ಲಿ ಎರಡನೇ ಬಾರಿಗೆ ಪೆಟ್ರೋಲ್‌, ಡೀಸೆಲ್‌ ದರ ಕಡಿಮೆಯಾಗಿದೆ. ಪರಿಷ್ಕೃತ ದರಗಳು ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ಹೇಳಲಾಗುತ್ತಿದೆ. ಪರಿಷ್ಕೃತ ದರದಂತೆ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಲೀಟರಿಗೆ ರು.63.20 ಹಾಗೂ 44.95 ಜಾರಿಯಾಗಲಿದ್ದು, ಇತರೆ ರಾಜ್ಯಗಳಲ್ಲಿ ಮತ್ತು ಆಯಾ ಪ್ರದೇಶಗಳಲ್ಲಿ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ದರದಲ್ಲಿ ವ್ಯತ್ಯಾಸವಾಗಲಿದೆ ಎಂದು ತಿಳಿದುಬಂದಿದೆ.

ವಾರಗಳಿಗೊಮ್ಮೆ ತೈಲ ಮಾರಾಟಗಾರರು ಅಂತಾರಾಷ್ಟ್ರೀಯ ದರಕ್ಕನುಗುಣವಾಗಿ ತೈಲ ಬೆಲೆಗಳನ್ನು ಪರಿಷ್ಕರಿಸುತ್ತಿರುವ ಹಿನ್ನೆಲೆಯಲ್ಲಿ ಆ.15 ರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಇಳಿಕೆಯಾಗುತ್ತಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!