ಎಲ್.ಕೆ.ಆಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ನರೇಂದ್ರ ಮೋದಿಯವರ ಭಾಷಣ 'ದೃಢ ನಿಲುವನ್ನು' ಸೂಚಿಸುತ್ತದೆ: ಆಡ್ವಾಣಿ

ಕಳೆದ ಒಂದು ವರ್ಷದಲ್ಲಿ ದೇಶ ಸದೃಢವಾಗಿ ಬೆಳೆದಿದೆ ಎಂದು ಹೇಳಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ...

ನವದೆಹಲಿ: ಕಳೆದ ಒಂದು ವರ್ಷದಲ್ಲಿ ದೇಶ ಸದೃಢವಾಗಿ ಬೆಳೆದಿದೆ ಎಂದು ಹೇಳಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಾಡಿರುವ ಭಾಷಣ ಅವರ ದೃಢ ನಿಲುವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಕಳೆದ ವರ್ಷ ಒಂದು ಪ್ರಮುಖ ರಾಜಕೀಯ ರೂಪಾಂತರ ನಡೆಯಿತು. ಸರ್ಕಾರದ ಆಡಳಿತದ ಎರಡನೇ ವರ್ಷದ ಈ ಸಂದರ್ಭದಲ್ಲಿ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೇಳಿದ್ದನ್ನೇ ಅವರು ಈ ವರ್ಷವೂ ಪುನರಾವರ್ತನೆ ಮಾಡಿದ್ದಾರೆ. ಅವರ ನಿರ್ಧಾರದಲ್ಲಿ ದೃಢತೆಯಿದೆ ಎಂದು ತಮ್ಮ ನಿವಾಸದಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರದಲ್ಲಿನ ಆತ್ಮ ವಿಶ್ವಾಸ ನಮ್ಮ ದೇಶದ ಶ್ರಮಿಕರಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel