ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (ಸಂಗ್ರಹ ಚಿತ್ರ) 
ದೇಶ

ಮ.ಪ್ರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವನ್ನು ಮೋದಿಗೆ ಸಮರ್ಪಿಸಿದ ಚೌಹಾಣ್

ಮಧ್ಯಪ್ರದೇಶದ 10 ಸ್ಥಳೀಯ ಸಂಸ್ಥೆಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ದಾಖಲಿಸಿರುವುದನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದ್ದಾರೆ...

ಮಧ್ಯಪ್ರದೇಶ: ಮಧ್ಯಪ್ರದೇಶದ 10 ಸ್ಥಳೀಯ ಸಂಸ್ಥೆಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ದಾಖಲಿಸಿರುವುದನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದ್ದಾರೆ.

ಕಳೆದ ಆ.12 ರಂದು 10 ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆದಿತ್ತು. 10 ಸ್ಥಳದಲ್ಲಿ ಬಿಜೆಪಿ 8 ಸ್ಥಳಗಳಾದ ಮೊರೆನಾ, ಉಜ್ಜೈನ್, ಹಾರ್ದಾ, ಚಕ್ ಘಾಟ್, ಭೈಂಸ್ ದೇಹಿ, ಕೋಟಾರ್, ಸುವಾಸರ ಮತ್ತು ವಿದಿಶಾಗಳಲ್ಲಿ ಭರ್ಜರಿ ಗೆಲವು ಸಾಧಿಸಿದೆ.

ಸ್ಥಳೀಯ ಚುನಾವಣೆಯ ಗೆಲುವು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಚೌಹಾಣ್, ಮೋದಿ ಅವರು ಜಾರಿಗೆ ತಂದ ಹೊಸ ನೀತಿ ಹಾಗೂ ಸಿದ್ದಾಂತಗಳೇ ಕಾರಣ. ಈ ಗೆಲವು ಮೋದಿಯವರಿಗೆ ಸಮರ್ಪಿತ. ನನಗೆ ಯಾವುದೇ ತೊಂದರೆಗಳಿಲ್ಲ. ಆದರೆ, ರಾಜ್ಯದ ವಿರುದ್ಧ ನಮ್ಮನ್ನು ಎತ್ತಿಕಟ್ಟಲು ಯತ್ನಿಸಿದವರ ವಿರುದ್ಧ ಕೋಪವಿದೆ. ಅನಾರೋಗ್ಯ ಪೀಡಿತ ಎಂಬ ಖ್ಯಾತಿಗೆ ತುತ್ತಾಗಿದ್ದ ಮಧ್ಯಪ್ರದೇಶವನ್ನು ಇದೀಗ ಆ ಖ್ಯಾತಿಯಿಂದ ಹೊರತಂದಿದ್ದೇವೆ. ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ