ದೇಶ

ಎಫ್ ಟಿ ಐ ಐ ವಿದ್ಯಾರ್ಥಿಗಳ ಬಂಧನ ಪ್ರಜಾಪ್ರಭುತ್ವ ನಂಬಿರುವವರಿಗೆ ಭಯ ಮೂಡಿಸುತ್ತಿದೆ: ನಿತೀಶ್

Srinivas Rao BV

ಪಾಟ್ನಾ: ಎಫ್.ಟಿ.ಐ.ಐ ವಿದ್ಯಾರ್ಥಿಗಳ ಬಂಧನ ರಾಜಕೀಯ ವಿಷಯವಾಗಿ ಪರಿಣಮಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬಂಧನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳನ್ನು ಬಂಧಿಸುವ ಕ್ರಮ ಪ್ರತಿಭಟಿಸುವವರ ಅಭಿಪ್ರಾಯಗಳಿಗೆ ಬೆಲೆ ಇಲ್ಲದಂತಾಗಿರುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಪ್ರತಿಭಟನಾ ನಿರತರನ್ನು ಬಂಧಿಸಿರುವುದು ಪ್ರಜಾಪ್ರಭುತ್ವವನ್ನು ನಂಬುವವರಿಗೆ ಭಯ ಮೂಡಿಸುತ್ತಿದೆ ಎಂದಿದ್ದು ಬಂಧನಕ್ಕೊಳಗಾದ ವಿದ್ಯಾರ್ಥಿಗಳನ್ನು ಬೆಂಬಲಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ವಿದ್ಯಾರ್ಥಿಗಳ ಬಂಧನವನ್ನು ಖಂಡಿಸಿದ್ದಾರೆ. ಇತ್ತೀಚೆಗಷ್ಟೇ ಎ.ಫ್.ಟಿ.ಐ.ಐ ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ  ವಿದ್ಯಾರ್ಥಿಗಳ ಬಂಧನಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಬಂಧಿಸಲು ವಿದ್ಯಾರ್ಥಿಗಳೇನು ಕ್ರಿಮಿನಲ್ ಗಳಾ ಎಂದು ಮೋದಿ ಅವರನ್ನು ಪ್ರಶ್ನಿಸಿದ್ದಾರೆ.     

ಎಫ್.ಟಿ.ಐ.ಐ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸದಸ್ಯ ಗಜೇಂದ್ರ ಸಿಂಗ್ ಚೌಹಾಣ್ ಅವರನ್ನು ನೇಮಕ ಮಾಡಾಲಾಗಿರುವುದನ್ನು ವಿರೋಧಿಸಿ ಕಳೆದ ಜುಲೈ ನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

SCROLL FOR NEXT