ಭಾರತ-ಪಾಕ್ ಗಡಿ (ಸಂಗ್ರಹ ಚಿತ್ರ) 
ದೇಶ

ಗಡಿ ಉದ್ವಿಗ್ನ; ಸಂಯಮ ಕಾಯ್ದುಕೊಳ್ಳಿ: ವಿಶ್ವಸಂಸ್ಥೆ

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ನಿರಂತರ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ, ಸಂಯಮ ಕಾಯ್ದುಕೊಳ್ಳುವಂತೆ ಉಭಯ ದೇಶಗಳಿಗೆ ಸಲಹೆ ನೀಡಿದೆ.

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ನಿರಂತರ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಬಿಡುಗಡೆ ಮಾಡಿರುವ  ವಿಶ್ವಸಂಸ್ಥೆ, ಸಂಯಮ ಕಾಯ್ದುಕೊಳ್ಳುವಂತೆ ಉಭಯ ದೇಶಗಳಿಗೆ ಸಲಹೆ ನೀಡಿದೆ.

ಭಾರತ-ಪಾಕ್ ಗಡಿಯಲ್ಲಿನ ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸುತ್ತಿರುವ ವಿಶ್ವಸಂಸ್ಥೆ ಗಡಿಯಲ್ಲಿ ಸಂಯಮ ಕಾಯ್ದುಕೊಳ್ಳುವಂತೆ ಉಭಯ ದೇಶಗಳಿಗೆ ಸಲಹೆ ನೀಡಿದೆ. ಇದೇ ವೇಳೆ  ಉಭಯ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯನ್ನು ಸ್ವಾಗತಿಸಿರುವ ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಅವರು, ಗಡಿಯಲ್ಲಿ ಶಾಂತಿ ಸ್ಥಾಪನೆಗಾಗಿ ಉಭಯ ದೇಶಗಳ  ಸೈನಿಕರು ಸಂಯಮ ಕಾಯ್ದುಕೊಳ್ಳಬೇಕು ಎಂದು ಹೇಳಿದ್ದಾರೆ.

ಸತತ ಮೂರು ದಿನಗಳಿಂದ ಭಾರತ-ಪಾಕ್ ಗಡಿಯಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಈ ವರೆಗೂ ಓರ್ವ ನಾಗರಿಕ ಸೇರಿದಂತೆ ಸುಮಾರು 6 ಮಂದಿ ಮೃತಪಟ್ಟಿದ್ದಾರೆ. ಕದನ ವಿರಾಮ  ಉಲ್ಲಂಘಿಸಿ ಪಾಕಿಸ್ತಾನ ಸೇನೆ ಗಡಿಯಲ್ಲಿ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದು, ಜಮ್ಮು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ಬಳಿ ಪಾಕ್ ಸೇನೆಯ ಗುಂಡಿನ ದಾಳಿಗೆ ಓರ್ವ ನಾಗರಿಕನಿಗೆ  ಗಾಯವಾಗಿತ್ತು. ಇದಲ್ಲದೆ ಜಮ್ಮುವಿನ ಪೂಂಚ್ ಜಿಲ್ಲೆಯ ಸೌಜಿಯಾನ ಮತ್ತು ಮಂಡಿ ಸೆಕ್ಟರ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿತ್ತು,  ಕಳೆದ ಭಾನುವಾರ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 1 ಘಟನೆಯವರೆಗೂ ಗುಂಡಿನ ದಾಳಿ ನಡೆಸಿತ್ತು.

ಹೀಗಾಗಿ ಪಾಕಿಸ್ತಾನದ ನಿರಂತರ ಕದನ ವಿರಾಮ ಉಲ್ಲಂಘನೆ ಕುರಿತಂತೆ ಭಾರತ ವಿಶ್ವಸಂಸ್ಥೆಗೆ ಮಂಗಳವಾರ ವರದಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಬಾನ್ ಕಿಮೂನ್ ಅವರು ಹೇಳಿಕೆ ಬಿಡುಗಡೆ  ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

ಮದ್ಯ ಮಾರಾಟದಲ್ಲಿ ಶೇ.0.51 ಇಳಿಕೆ, ಆದರೂ ಸರ್ಕಾರಕ್ಕೆ 36,492 ಕೋಟಿ ರೂ. ಆದಾಯ..!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

SCROLL FOR NEXT