ಗೋಪಾಲ್ ವಾಲ್ಮಿಕಿ 
ದೇಶ

ರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಯುವಕನ ಬಂಧನ

ನಡುರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡು, ಅಸಭ್ಯವಾಗಿ ವರ್ತಿಸಿದ್ದ ಯುವಕನನ್ನು ಬುಧವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬಯಿ: ನಡುರಸ್ತೆಯಲ್ಲೇ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡು, ಅಸಭ್ಯವಾಗಿ ವರ್ತಿಸಿದ್ದ ಯುವಕನನ್ನು ಬುಧವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಆರೋಪಿ 20 ವರ್ಷದ ಗೋಪಾಲ್ ವಾಲ್ಮಿಕಿ ಎಂಬಾತನನ್ನು ಇಂದು ಬೆಳಗ್ಗೆ ಬಂಧಿಸಲಾಗಿದೆ ಎಂದು ಕೊಲಬ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ವಿನಯ್ ಗಾಡ್ಗಿಲ್ ಅವರು ತಿಳಿಸಿದ್ದಾರೆ.

ಕಳೆದ ಸೋಮವಾರ ಗೋಪಾಲ್ ವಾಲ್ಮಿಕಿಯ ಈ ಲಜ್ಜೆಗೆಟ್ಟ ಲೈಂಗಿಕ ಕ್ರಿಯೆಯನ್ನು ಕಂಡ ಅಮೆರಿಕ ಮೂಲದ ಲೇಖಕಿ ಮರಿಯಾನಾ ಆಬ್‌ಡೋ ಅವರು, ಆತನ ನಿರ್ಲಜ್ಜ ಕ್ರಿಯೆಯನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು. ಅಲ್ಲದೆ ಆ ವ್ಯಕ್ತಿಯ ಫೋಟೋವನ್ನು ಟ್ವಿಟರ್ ಹಾಕಿ ಘಟನೆಯನ್ನು ವಿವರಿಸಿದ್ದರು. ಇದು ಸಾಮಾಜಿಕ ತಾಣದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

ಮರಿಯಾನಾ ಅವರ ಟ್ವಿಟರ್‌ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಾರ್ಯಾಲಯ, ಆರೋಪಿಯ ಬಂಧನಕ್ಕೆ ಕಾರ್ಯಾಚರಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು, ಮರಿಯಾನಾ ಅವರ ಹೇಳಿಕೆ ಪಡೆದಿದ್ದ ದಕ್ಷಿಣ ಮುಂಬೈನ ಕೊಲಬ ಪೊಲೀಸ್ ಠಾಣೆಯ ಪೊಲೀಸರು ಇಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!