ನವದೆಹಲಿ: ಸಫಾಯಿಕರ್ಮಚಾರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕ ಕಮಾಂಡರ್ ಸುರಿಂಧರ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ತಮ್ಮ ಮೇಲೆ ಆಪ್ ಶಾಸಕ ಹಲ್ಲೆ ನಡೆಸಿದ್ದಾರೆ ಎಂದು ಸಫಾಯಿಕರ್ಮಚಾರಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ದೆಹಲಿ ಪೊಲೀಸರು ಇಂದು ದೆಹಲಿಯ ಕಂಟೋನ್ಮೆಂಟ್ ಕ್ಷೇತ್ರದ ಶಾಸಕ ಸುಧೀಂದ್ರ ಕುಮಾರ್ ಅವರನ್ನು ಬಂಧಿಸಿದ್ದಾರೆ.