ದೇಶ

ಸ್ಮೃತಿ ಇರಾನಿ ನಿದ್ದೆಗೆಡಿಸಿದ "ಸ್ಪೆಲ್ಲಿಂಗ್ ಮಿಸ್ಟೇಕ್"

Srinivasamurthy VN

ನವದೆಹಲಿ: ಕೇಂದ್ರ ಶಿಕ್ಷಣ ಇಲಾಖೆ ಹೊರಡಿಸಿದ್ದ ಪ್ರಶಂಸನಾ ಪತ್ರವೊಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಇರುಸು-ಮುರುಸು ಉಂಟುಮಾಡಿದ್ದು, ಸಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಒಂದಿಲ್ಲೊಂದು ಕಾರಣಕ್ಕೆ ಸುದ್ದಿಗೆ ಗ್ರಾಸವಾಗುತ್ತಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಇದೀಗ ತಮ್ಮ ಇಲಾಖೆ ಹೊರಡಿಸಿದ್ದ ಪತ್ರದಲ್ಲಿನ ಅಕ್ಷರಗಳಲ್ಲಿನ ತಪ್ಪಿನಿಂದಾಗಿ (ಸ್ಪೆಲ್ಲಿಂಗ್ ಮಿಸ್ಟೇಕ್) ಸಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆ. ಈ ಹಿಂದೆ ಕೇಂದ್ರೀಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ್ದ ರಿಚಾ ಕುಮಾರ್ ಎಂಬ ವಿದ್ಯಾರ್ಥಿಗೆ ಕೇಂದ್ರ ಶಿಕ್ಷಣ ಇಲಾಖೆ ಬರೆದಿರುವ ಪತ್ರದಲ್ಲಿ ಸಾಕಷ್ಟು ಅಕ್ಷರಗಳು ತಪ್ಪಿನಿಂದ ಕೂಡಿದ್ದು, ಇದು ಇದೀಗ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪತ್ರದಲ್ಲಿ ಆಂಗ್ಲಭಾಷೆಯಲ್ಲಿ ಬರೆಯಲಾಗಿರುವ MINISTER ಪದದ ಬದಲಿಗೆ MINSTER ಎಂದು ಮುದ್ರಣವಾಗಿದ್ದು, ಹಿಂದಿಯಲ್ಲಿ ಬರೆದಿರುವ ಅಕ್ಷರಗಳೂ ಕೂಡ ತಪ್ಪಾಗಿದೆ. ಪತ್ರದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಇದೀಗ ಸಾಕಷ್ಟು ಸುದ್ದಿಗೆ ಗ್ರಾಸವಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ ಇದು ಕಣ್ತಪ್ಪಿನಿಂದಾಗಿದ್ದು ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ಕೂಡ ನೀಡಿದ್ದಾರೆ.

SCROLL FOR NEXT