ಮುಲಾಯಂ ಸಿಂಗ್ ಯಾದವ್ 
ದೇಶ

ಅತ್ಯಾಚಾರ ಕುರಿತ ವಿವಾದಾತ್ಮಕ ಹೇಳಿಕೆ: ಮುಲಾಯಂ ಸಿಂಗ್ ಗೆ ನೋಟೀಸ್

ಅತ್ಯಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾಗಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ಸ್ವಯಂ ಪ್ರೇರಿತ ದೂರು ....

ಮಹೋಬಾ: ಅತ್ಯಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾಗಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 16 ರಂದು ಹಾಜರಾಗಬೇಕೆಂದು ನೊಟೀಸ್ ನೀಡಿದೆ.

ಮಹಿಳೆ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಹೇಳಿಕ ನೀಡಿದ್ದ ಮುಲಾಯಂ ಸಿಂಗ್ ಯಾದವ್   ಏಕ ಕಾಲದಲ್ಲಿ ನಾಲ್ವರು ಒಟ್ಟಿಗೆ ಅತ್ಯಾಚಾರ ನಡೆಸಲು ಹೇಗೆ ಸಾಧ್ಯ, ಒಬ್ಬ ಆರೋಪಿ ಅತ್ಯಾಚಾರ ನಡೆಸಿರುತ್ತಾನೆ.  ಸಂತ್ರಸ್ತ ಮಹಿಳೆ ನಾಲ್ವರ ವಿರುದ್ದ ದೂರು ನೀಡಿರುತ್ತಾಳೆ ಎಂದು ಆಗಸ್ಟ್ 18 ರಂದು ಲಕ್ನೋದಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಮಹಿಳೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಮುಲಾಯಂ ಸಿಂಗ್ ವಿರುದ್ಧ, ಐಪಿಸಿ ಸೆಕ್ಷನ್ 504, 505, 509 ಕಲಂಗಳ ಅನ್ವಯ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮನ್ಸ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!