ವಿಶೇಷ ಕಾರ್ಯ ಪಡೆ 
ದೇಶ

ನಕ್ಸಲ್ ದಾಳಿ: ಎಸ್‌ಟಿಎಫ್ ಹಿರಿಯ ಅಧಿಕಾರಿ ಸಾವು

ನಕ್ಸಲ್ ದಾಳಿಯಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಹಿರಿಯ ಅಧಿಕಾರಿ ಮೃತಪಟ್ಟಿದ್ದು, ಓರ್ವ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ...

ರಾಯ್‍ಪುರ್: ನಕ್ಸಲ್ ದಾಳಿಯಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್)ಯ ಹಿರಿಯ ಅಧಿಕಾರಿ ಮೃತಪಟ್ಟಿದ್ದು, ಓರ್ವ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶವಾದ ಛತ್ತೀಸ್‌ಗಢ್ ದ ಬಸ್ತಾರ್ ಜಿಲ್ಲೆಯ ದರ್ಬಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 30ರ ಬಳಿ ನಕ್ಸಲ್ ಕಾರ್ಯಾಚರಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಕ್ಸಲರು ದಾಳಿ ನಡೆಸಿದ್ದು, ಹಿರಿಯ ಅಧಿಕಾರಿ ಕೃಷ್ಣಪಾಲ್ ಸಿಂಗ್ ಮೃತಪಟ್ಟಿದ್ದು, ಕಾನ್ಸ್ಟೇಬಲ್ ಸಂತೋಷ್ ಯಾದವ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜನರಲ್ ಆಫ್ ಪೊಲೀಸ್ ಇನ್ಸ್ಪೆಕ್ಟರ್ ದೀಪನ್ಶು ಕಬ್ರಾ ತಿಳಿಸಿದ್ದಾರೆ.

ನಕ್ಸಲರು 2013ರ ಮೇ ತಿಂಗಳಲ್ಲಿ ಕಾಂಗ್ರೆಸ್ ಮುಖಂಡ ಸೇರಿ 31 ಮಂದಿಯನ್ನು ಹತ್ಯೆ ಮಾಡಿದ್ದ ಬಸ್ತಾರ್ ನ ಜೀರಾಮ್ ಘಾಟಿ ಸಮೀಪದ ದರ್ಬಾ ಬಲಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಕ್ಸಲ್ ದಾಳಿ ಗಾಯಗೊಂಡಿರುವ ಸಂತೋಷ್ ಯಾದವ್ ನನ್ನು ಜಗ್ದಲ್ಪುರ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕಬ್ರಾ ತಿಳಿಸಿದ್ದಾರೆ.

ನಕ್ಸಲ್ ದಾಳಿ ಕುರಿತಂತೆ ಮಾಹಿತಿ ಸಿಕ್ಕ ತಕ್ಷಣ ಘಟನಾ ಸ್ಥಳಕ್ಕೆ ಹೆಚ್ಚುವರಿಯಾಗಿ ತಂಡವನ್ನು ಕಳಿಸಲಾಗಿದ್ದು, ನಕ್ಸಲ್ ರ ಪತ್ತೆಗೆ ತೀವ್ರ ಶೋಧಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT