ಪ್ರಧಾನಿ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ 
ದೇಶ

ಆಪ್ ಶಾಸಕ ಸುರಿಂದರ್ ಸಿಂಗ್ ಬಂಧನ ಪ್ರಕರಣ: ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ

ಆಮ್ ಆದ್ಮಿ ಪಕ್ಷದ ಶಾಸಕ ಸುರಿಂದರ್ ಸಿಂಗ್ ಬಂಧನ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ....

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಸುರಿಂದರ್ ಸಿಂಗ್ ಬಂಧನ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಆಪ್ ಶಾಸಕ ಸುರಿಂದರ್ ಸಿಂಗ್ ಅವರ ಬಂಧನದ ಹಿಂದೆ ಮೋದಿ ಕೈವಾಡವಿದೆ ಎಂದು ಆರೋಪಿಸಿದರು. ಸುರಿಂದರ್ ಸಿಂಗ್ ಬಂಧನವಾಯ್ತು. ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ ಪ್ರಧಾನಿ ಮೋದಿಗೆ ಏನು ಸಿಕ್ತು. ಇದರಿಂದ ಅವರಿ ಸಾಧಿಸಿದ್ದಾದರೂ ಏನು? ಸುರೀಂದರ್ ಸಿಂಗ್ ಬಂಧನದ ಹಿಂದಿನ ಉದ್ದೇಶವೇನು ಎಂದು ಟ್ವೀಟರ್ ನಲ್ಲಿ ಪ್ರಶ್ನಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಕ್ಷೇತ್ರ ಆಪ್ ಶಾಸಕ ಸುರಿಂದರ್ ಸಿಂಗ್ ಆಗಸ್ಟ್ 4 ರಂದು ದೆಹಲಿ ಮಹಾನಗರ ಪಾಲಿಕೆಯ ನೌಕರನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸುರೀಂದರ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. 24 ಗಂಟೆಗಳೊಳಗೆ ಸಿಂಗ್ ಜಾಮೀನಿನ ಮೇಲೆ ಹೊರ ಬಂದಿದ್ದರು.

ನಕಲಿ ಪದವಿ ಪ್ರಮಾಣ ಪತ್ರದ ಆರೋಪದ ಮೇಲೆ ದೆಹಲಿಯ ಮಾಜಿ ಕಾನೂನು ಸಚಿವ ಜೀತೇಂದ್ರ ಸಿಂಗ್ ತೋಮಾರ್ ಅವರನ್ನು ಬಂಧಿಸಲಾಗಿತ್ತು. ಅದಾದ ನಂತರ ಭೂ ವಂಚನೆ ಪ್ರಕರಣದಲ್ಲಿ ಶಾಸಕ ಮನೋಜ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.






Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!