ಮದ್ಯಪಾನ ಮಾಡಿ ಮೆಟ್ರೋ ಏರಿದ್ದ ಪೊಲೀಸ್ ಪೇದೆ ಅಮಾನತು
ಕಂಠ ಪೂರ್ತಿ ಕುಡಿದು ದೆಹಲಿ ಮೆಟ್ರೋ ಏರಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.
ನವದೆಹಲಿ: ಕಂಠ ಪೂರ್ತಿ ಕುಡಿದು ದೆಹಲಿ ಮೆಟ್ರೋ ಏರಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.
ಪಾನಮತ್ತ ಪೇದೆ ಮೆಟ್ರೋ ರೈಲಿನಲ್ಲಿ ತೂರಾಡುತ್ತಿದ್ದ ವಿಡಿಯೋ ಆ.24 ರಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಪಾನಮತ್ತ ಪೊಲೀಸ್ ಪೇದೆಯನ್ನು ಗುರುತಿಸಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಸ್ಸಿ ಹೇಳಿದ್ದಾರೆ.
ಇದೇ ವೇಳೆ ಪೊಲೀಸ್ ಇಲಾಖೆಯ ಪೇದೆಗಳಿಗೆ ಎಚ್ಚರಿಕೆ ನೀಡಿರುವ ಬಸ್ಸಿ, ಯಾವುದೇ ಪೇದೆ ಸಮವಸ್ತ್ರ ಧರಿಸಿ ಮದ್ಯಪಾನ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಮದ್ಯದ ಅಮಲಿನಲ್ಲಿದ್ದ ಪೇದೆ ನಿಂತಿಕೊಳ್ಳಲು ಸಾಧ್ಯವಾಗದೆ ಅತ್ತಿಂದಿತ್ತ ತೂರಾಡಿ ಜೊತೆಗೆ ನಿಯಂತ್ರಣ ಕಳೆದುಕೊಂಡು ರೈಲಿನಲ್ಲಿ ಬಿದ್ದಿದ್ದ ಪೊಲೀಸ್ ಪೇದೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.