ಒಆರ್ ಒಪಿ ಪ್ರತಿಭಟನೆ ನಿವೃತ್ತ ಯೋಧರು(ಸಂಗ್ರಹ ಚಿತ್ರ) 
ದೇಶ

ಒಆರ್ ಒಪಿ ಪ್ರತಿಭಟನೆ: ಆಮರಣಾಂತ ಉಪವಾಸ ನಿರತ ನಿವೃತ್ತ ಯೋಧ ಅಸ್ವಸ್ಥ

ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಪುಷ್ಪೇಂದರ್ ಸಿಂಗ್ ಅಸ್ವಸ್ಥಗೊಂಡಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ) ಜಾರಿಗೆ ಆಗ್ರಹಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ನಿವೃತ್ತ ಯೋಧ ಕರ್ನಲ್ ಪುಷ್ಪೇಂದರ್ ಸಿಂಗ್ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತತ ಎಂಟನೇ ದಿನ ಉಪವಾಸ ಪ್ರತಿಭಟನೆ ನಡೆಸಿದ್ದ ಪುಷ್ಪೇಂದರ್ ಸಿಂಗ್ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಅಸ್ವಸ್ಥಗೊಂದ ಮಾಜಿ ಯೋಧರನ್ನು ದಕ್ಷಿಣ ದೆಹಲಿಯ ರಾಕ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾ ನಿರತ  ಮಾಜಿ ಸೈನಿಕರ ಸಂಘದ ವಕ್ತಾರ ಅನಿಲ್ ಕೌಲ್ ತಿಳಿಸಿದ್ದಾರೆ.

ಆಮರಣಾಂತ ಉಪವಾಸ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ಪುಷ್ಪೇಂದರ್ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈಗ ನಿವೃತ್ತ ಯೋಧ ಹವಾಲ್ದಾರ್ ತೇಜ್ ನೇತೃತ್ವ ವಹಿಸಿದ್ದಾರೆ. ಆಮರಣಾಂತ ಉಪವಾಸ ಪ್ರತಿಭಟನೆಯಲ್ಲಿ  ಪಾಲ್ಗೊಂಡಿರುವ ಮೇಜರ್ ಸಿಂಗ್ ಮತ್ತು ಅಶೋಕ್ ಕುಮಾರ್ ಚೌಹಾಣ್ ಆರೋಗ್ಯದ ಬಗ್ಗೆ ಆತಂಕ ಇಲ್ಲ ಎಂದು ಅನಿಲ್ ಕೌಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT