ಸಾಂದರ್ಭಿಕ ಚಿತ್ರ 
ದೇಶ

ಸಹಪಾಠಿಗಳಿಂದಲೇ 9ನೇ ತರಗತಿ ವಿದ್ಯಾರ್ಥಿಯ ಹತ್ಯೆ

ತರಗತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ದೂರು ನೀಡಿದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳೇ ಕಬ್ಬಿಣದ ರಾಡ್‌ನಿಂದ....

ನವದೆಹಲಿ: ತರಗತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ದೂರು ನೀಡಿದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿರುವ ಘಟನೆ ದೆಹಲಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.  ಈ ಪ್ರಕರಣ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

14 ವರ್ಷದ ಶುಭಂ ಕೊಲೆಯಾದ ವಿದ್ಯಾರ್ಥಿ. ಕಳೆದ ಶುಕ್ರವಾರ ಶಾಲೆ ಮುಗಿದ ನಂತರ ಶುಭಂನನ್ನು ಇಬ್ಬರು ಸಹಪಾಠಿಗಳು ಸೈಕಲ್‌ನಲ್ಲಿ ಕರೆದುಕೊಂಡು ಹೋಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಪೋಷಕರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

 ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯ ಶವ ಪಾಳು ಬಿದ್ದ  ಬಿದ್ದಿತ್ತು. ಈ ಸಂಬಂಧ ಸಹಪಾಠಿಗಳನ್ನು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ.

ಸಹಪಾಠಿಗಳು ಕಬ್ಬಿಣದ ರಾಡ್‌ನಿಂದ ಶುಭಂನ ತಲೆಗೆ ಬಲವಾಗಿ ಹೊಡೆದು ಕೊಂದಿದ್ದಾರೆ. ಘಟನೆಯ ನಂತರ ಆ ಇಬ್ಬರೂ ಹುಡುಗರು ಬಸ್ ಹತ್ತಿ ಹರಿಯಾಣಾಗೆ ತೆರಳಿದ್ದರು. ಅವರಿರುವ ಜಾಗದ ಜಾಡನ್ನು ಹುಡುಕಿ ಹರಿಯಾಣಾದ ಝಾಜ್ಜಿಹಾರ್‌ನಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT