ದೇಶ

ಜಿಎಸ್‌ಟಿ ಕಾಯ್ದೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ನೂತನ ತಯಾರಿ!

Vishwanath S

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಕಾಯ್ದೆಯ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೂತನ ತಯಾರಿ ನಡೆಸಿದೆ.

ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಜಿಎಸ್ಟಿ ಕಾಯ್ದೆ ಅನುಷ್ಠಾನಕ್ಕೆ ಕಳೆದ ಮುಂಗಾರು ಅಧಿವೇಶನದ ವೇಳೆ ಕೇಂದ್ರ ಸರ್ಕಾರ ಸಕಲ ಪ್ರಯತ್ನಗಳನ್ನು ನಡೆಸಿತ್ತು. ಆದರೆ ವಿರೋಧ ಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಯ್ದೆ ಅನುಷ್ಠಾನ ಸಿಗದೇ ಹಾಗೆ ಉಳಿದಿದೆ.

ತೆರಿಗೆ ಸುಧಾರಣೆ ಆರ್ಥಿಕ ನಿರ್ಣಾಯಕ ಮತ್ತು ಜನಾಭಿಪ್ರಾಯವನ್ನು ನಿರ್ಮಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿಕೊಳ್ಳುಲಾಗುತ್ತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು ತಿಳಿಸಿದ್ದಾರೆ.

SCROLL FOR NEXT