ಅರವಿಂದ್ ಕೇಜ್ರಿವಾಲ್ - ನರೇಂದ್ರ ಮೋದಿ 
ದೇಶ

ಆಪ್ ಸರ್ಕಾರದೊಂದಿಗೆ ದೆಹಲಿ ಪೊಲೀಸರ ಕಾಳಗ: ಮೋದಿ ಭೇಟಿ ಮಾಡಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ದೆಹಲಿ ಪೊಲೀಸರು ಸದಾ ತಮ್ಮ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ದೆಹಲಿ ಪೊಲೀಸರು ಸದಾ ತಮ್ಮ ಸರ್ಕಾರದೊಂದಿಗೆ ಕಾದಾಟಕ್ಕಿಳಿಯುತ್ತಾರೆ ಎಂದು ದೂರಿದ್ದಾರೆ. ಅಲ್ಲದೆ ತಮಗೆ ಕೇಂದ್ರ ಸರ್ಕಾರದ ಸಹಕಾರ ಸಿಕ್ಕರೆ ನಗರ ಪ್ರಕಾಶಿಸುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಪೊಲೀಸ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ತಮ್ಮ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಇಂದು ಕೇಜ್ರಿವಾಲ್ ಪ್ರಧಾನಿಯನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ.

'ದೆಹಲಿ ಪೊಲೀಸರು ಆಪ್ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ ಎಂದಿರುವ ಕೇಜ್ರಿವಾಲ್, ಇದು ಪ್ರಜಾಪ್ರಭುತ್ವಕ್ಕೆ ಮಾರಕ' ಎಂದು ಹೇಳಿದ್ದಾರೆ.

ಮೋದಿ ಅವರು ಸಹ ಒಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದು ಬಂದವರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯಪಾಲರಿಂದ ನನ್ನ ಹಾಗೆ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹ ಪಡೆ(ಎಸ್‌ಸಿಬಿ) ಮೂಲಕ ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಿತ್ತು. ಆದರೆ ಈಗ ಎಸಿಬಿಗೆ ಒಬ್ಬ ಭ್ರಷ್ಟ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ