ಸಾಂದರ್ಭಿಕ ಚಿತ್ರ 
ದೇಶ

ರೇಪ್ ಮಾಡಿ ಹತ್ಯೆಗೈದು, ಮತ್ತೆ ಶವವನ್ನೇ ರೇಪ್ ಮಾಡಿದ ಕಾಮುಕರು

ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ಸಾಗಿದ್ದು, ಯುವತಿಯೊಬ್ಬಳನ್ನು ಕ್ರೂರವಾಗಿ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದಿದ್ದಾರೆ...

ನವದೆಹಲಿ: ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೇ ಸಾಗಿದ್ದು, ಯುವತಿಯೊಬ್ಬಳನ್ನು ಕ್ರೂರವಾಗಿ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದಿದ್ದಾರೆ. ಆದರೆ, ಯುವತಿ ಸಾವನ್ನಪ್ಪಿದ್ದರೂ ಕೂಡ ಬಿಡದ ಕ್ರೂರಿಗಳು ಶವದ ಜೊತೆ ಮತ್ತೊಮ್ಮೆ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 

23 ವರ್ಷದ ಯುವತಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಮನ್ ವಿಹಾರ್ ಸಮೀಪ ಅಡ್ಡಗಟ್ಟಿದ ಕಿಡಿಗೇಡಿಗಳು, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕಾಮುಕರ ಕೈಯಲ್ಲಿ ನಲುಗಿದ ಯುವತಿ ಸಾವನಪ್ಪಿದ್ದಾಳೆ. ಆದರೂ ಬಿಡದ ರಾಕ್ಷಸರು ಶವದ ಮೇಲೆ ಅತ್ಯಾಚಾರವೆಸಗಿದ್ದಾರೆ.

ಆಗಸ್ಟ್ 21 ರಂದು ಈ ಘಟನೆ ನಡೆದಿದ್ದು, ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ವಿಶೇಷವೆಂದರೆ ಈ ಪ್ರತಿಭಟನೆಯಲ್ಲಿ ಕಾಮುಕರು ಪಾಲ್ಗೊಂಡಿದ್ದರು.

ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಅಪ್ರಾಪ್ತನು ಸೇರಿದ್ದಾನೆ. ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಬಿಟ್ಟಿದ್ದಾರೆ. ಆರೋಪಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ