ಶ್ರೀನಗರ: ಜಮ್ಮು ಕಾಶ್ಮೀರದ ಸೊಪೋರೆ ಜಿಲ್ಲೆಯ ವಿಜಿ ಎಂಬಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಅಕ್ರಮವಾಗಿ ಭಾರತದೊಳಗೆ ನುಗ್ಗಲು ಯತ್ನಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಯೋಧರು ಹತ್ಯೆ ಮಾಡಿದ್ದಾರೆ. ಇನ್ನುಳಿದಂತೆ ನಾಲ್ಕರಿಂದ ಐದು ಮಂದಿ ಉಗ್ರರು ಗುಹೆಯೊಂದರಲ್ಲಿ ಅಡಗಿರುವುದಾಗಿ ತಿಳಿದುಬಂದಿದ್ದು, ಉಗ್ರರ ವಿರುದ್ಧ ಯೋಧರು ಗುಂಡಿನ ದಾಳಿ ನಡೆಸುತ್ತಿದ್ದಾರೆ.
ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಪ್ರಗತಿಯಲ್ಲಿದೆ.