ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಅಪಾಯದ ಕರೆಗಂಟೆ: ಭಾರತೀಯರನ್ನು ಸೆಳೆಯುತ್ತಿರುವ ಉಗ್ರ ಸಂಘಟನೆ

ದೇಶದಲ್ಲಾಗುತ್ತಿರುವ ಯುವಕರ ಕಣ್ಮರೆಗೂ ಎಸ್‍ಐಎಸ್ ಉಗ್ರ ಸಂಘಟನೆಯ ಬಾಹುಗಳು ವ್ಯಾಪಿಸುತ್ತಿರುವುದಕ್ಕೂ ಸಂಬಂಧವಿದೆಯೇ...

ನವದೆಹಲಿ: ದೇಶದಲ್ಲಾಗುತ್ತಿರುವ ಯುವಕರ ಕಣ್ಮರೆಗೂ ಐಎಸ್‍ಐಎಸ್ ಉಗ್ರ ಸಂಘಟನೆಯ ಬಾಹುಗಳು ವ್ಯಾಪಿಸುತ್ತಿರುವುದಕ್ಕೂ ಸಂಬಂಧವಿದೆಯೇ? ಈ ಯುವಕರೆಲ್ಲ ಐಎಸ್ ಸೇರಿಕೊಂಡಿದ್ದಾರೆಯೇ ಅಥವಾ ಉಗ್ರ ಸಂಘಟನೆ ಪ್ರಬಲವಾಗಿರುವ ದೇಶಗಳತ್ತ ಪ್ರಯಾಣಿಸಿದ್ದಾರೆಯೇ? ಇಂತಹ ಪ್ರಶ್ನೆಗಳು ಈಗ ಬಲವಾಗತೊಡಗಿವೆ.

ಪ್ರಸಕ್ತ ತಿಂಗಳ ಆರಂಭದಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು 12 ರಾಜ್ಯಗಳ ಡಿಜಿಪಿಗಳು ಮತ್ತು ಗೃಹ ಕಾರ್ಯದರ್ಶಿಗಳ ಸಭೆ ನಡೆಸಿ, ಕಣ್ಮರೆಯಾಗಿರುವ 17 ಮಂದಿ ಯುವಕರ ಕುರಿತು ಚರ್ಚಿಸಿದೆ. ಭಾರತದ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಬೆದರಿಕೆಯನ್ನು ನಿರ್ಲಕ್ಷಿಸಲಾಗದು ಎಂದು ನವೆಂಬರ್‍ನಲ್ಲಷ್ಟೇ ಸರ್ಕಾರ ಹೇಳಿತ್ತು. ಈಗ 17 ಯುವಕರು ನಾಪತ್ತೆಯಾಗಿರುವ ಪ್ರಕರಣ, ದೇಶದಲ್ಲಿ ಅಪಾಯದ ಕರೆಗಂಟೆ ಬಾರಿಸಿದೆ.

ಆಂಗ್ಲ ಪತ್ರಿಕೆಯೊಂದಕ್ಕೆ ದೊರೆತ ಮಾಹಿತಿಯಂತೆ, ಭಾರತದ ಮತ್ತು ವಿದೇಶಿ ಗುಪ್ತಚರ ಸಂಸ್ಥೆಗಳ ಮಾಹಿತಿ ಪ್ರಕಾರ ಭಾರತದಿಂದ ಕಾಣೆಯಾದ 17 ಮಂದಿ ಐಎಸ್ ಅಥವಾ ಅದರ ಪ್ರತಿಸ್ಪರ್ಧಿ ಸಂಘಟನೆಯಾದ ಜಭಾತ್ ಅಲ್ ನುಸ್ರಾಗೆ ಸೇರ್ಪಡೆಗೊಂಡಿದ್ದಾರೆ. ಇಂಡಿಯನ್ ಮುಜಾಹಿದೀನ್ ನ 12ರಷ್ಟು ಮಂದಿಯೂ ಇಸ್ಲಾಮಿಕ್ ಸ್ಟೇಟ್ ಜತೆ   ಕೈಜೋಡಿಸಿಕೊಂಡಿದ್ದಾರೆ.

ಇದೇ ವೇಳೆ, ಉಗ್ರ ಸಂಘಟನೆ ಸೇರಿಕೊಳ್ಳಲೆಂದು ಪ್ರಯಾ-ಣಿ-ಸುತ್ತಿದ್ದ 22 ಮಂದಿಯನ್ನು ಪೊಲೀಸರು ತಡೆದಿದ್ದಾರೆ. ಇಂಡಿಯನ್ ಎಕ್ಸ್‍ಪ್ರೆಸ್ ವರದಿಗಾರರು 17 ಯುವಕರ ಮನೆಗಳಿಗೆ ಭೇಟಿಯಾಗಿ ಹಲವು ಮಾಹಿತಿ ಕಲೆಹಾಕಿದ್ದಾರೆ. ಈ ಪೈಕಿ ಒಬ್ಬ ಮಹಿಳೆಯೂ ಸೇರಿದ್ದು, ಆಕೆ ಮನೆಗೆ ವಾಪಸಾಗಿದ್ದಾಳೆ. ಇವರೆಲ್ಲರೂ ಶಿಕ್ಷಿತರಾಗಿದ್ದು, ಮಧ್ಯಮವರ್ಗಕ್ಕೆ ಸೇರಿದವರು.

ಐಎಸ್‍ಗೆ ಸೇರಿರುವವರ ಸಂಖ್ಯೆ ಕಡಿಮೆಯಾಗಿದ್ದರೂ, ದೇಶದ ಮುಸ್ಲಿಂ ಯುವಕರು ಧಾರ್ಮಿಕ ಮತ್ತು ರಾಜಕೀಯ ನಾಯಕತ್ವ ಹಾಗೂ ಹೆಚ್ಚುತ್ತಿರುವ ಕೋಮುಗಲಭೆಗಳಿಂದ ರೋಸಿ ಹೋಗಿ ಐಎಸ್‍ನತ್ತ ಆಕರ್ಷಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT