ರಕ್ಷಾಬಂಧನ (ಸಾಂಕೇತಿಕ ಚಿತ್ರ) 
ದೇಶ

ರಕ್ಷಾಬಂಧನದ ದಿನ ದೆಹಲಿ ನಗರ ಸಾರಿಗೆಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ

ರಕ್ಷಾಬಂಧನದ ಅಂಗವಾಗಿ ಮಹಿಳೆಯರಿಗೆ ದೆಹಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಆರೆಂಜ್ ಕ್ಲಸ್ಟರ್ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗಿದೆ.

ನವದೆಹಲಿ: ರಕ್ಷಾಬಂಧನದ ಅಂಗವಾಗಿ ಮಹಿಳೆಯರಿಗೆ ದೆಹಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಆರೆಂಜ್ ಕ್ಲಸ್ಟರ್ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗಿದೆ.

ದೆಹಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಎಸಿ ರಹಿತ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ ಎಂದು ದೆಹಲಿ ಸಾರಿಗೆ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.ಆ.29 ರಂದು ರಕ್ಷಾಬಂಧನ ನಡೆಯಲಿದ್ದು ಅಂದು ಬೆಳಿಗ್ಗೆ 8 ರಿಂದ ರಾತ್ರಿ 10 ವರೆಗೆ ಈ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ದೆಹಲಿ ಸರ್ಕಾರ ಆದೇಶ ನೀಡಿದೆ.

ರಕ್ಷಾಬಂಧನದ ದಿನದಂದು ಮಹಿಳೆಯರಿಗೆ ಉಪಯೋಗವಾಗುವಂತೆ ಹೆಚ್ಚಿನ ಬಸ್ ಸಂಚಾರ ಒದಗಿಸಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!