ಅರವಿಂದ್ ಕೇಜ್ರಿವಾಲ್ 
ದೇಶ

ಯುವಜನತೆ ಮೋದಿ ಆಡಳಿತದಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ: ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿದ್ದು, ಮೋದಿ ಅವರ ಯೋಜನೆ ವಿಫಲವಾಗಿದೆ ಎಂದಿದ್ದಾರೆ.

ಪಾಟ್ನಾ ಗೆ ಭೇಟಿ ನೀಡಿ ಬಿಹಾರ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಯುವಜನತೆ ಮೋದಿ ಅವರಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಮೋದಿ ಅವರ ಸ್ವಚ್ಛ ಭಾರತ ಅಭಿಯಾನ ವಿಫಲವಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮುನ್ನ ಕಪ್ಪು ಹಣ ವಾಪಸ್ ತರುವುದಾಗಿ ಮೋದಿ ಜನರಿಗೆ ಭರವಸೆ ನೀಡಿದ್ದರು. ಆದರೆ ಈಗ ಕಪ್ಪು ಹಣದ ವಿಷಯವನ್ನು ಕೈಬಿಟ್ಟಿರುವ ಮೋದಿ, ಜನರಿಗೆ ಯೋಗ ಮಾಡಲು ಹೇಳುತ್ತಿದ್ದಾರೆ. ಇದರೊಂದಿಗೆ ಸ್ವಚ್ಛ ಭಾರತ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಅಭಿಯಾನಕ್ಕಾಗಿ ಮಿಲಿಯನ್ ಗಟ್ಟಲೆ ಹಣ ಖರ್ಚು ಮಾಡಲಾಗಿದೆ. ಆದರೆ ಒಂದೇ ಒಂದು ರಸ್ತೆಯೂ ಸ್ವಚ್ಚವಾಗಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಹಾರದ ಜನತೆ, ದೆಹಲಿ ಅಥವಾ ಕೇಂದ್ರ ಸರ್ಕಾರದ ಎರಡು ಮಾದರಿಯ ಸರ್ಕಾರಗಳ ಪೈಕಿ ಒಂದು ಮಾದರಿಯನ್ನು  ಆಯ್ಕೆ ಮಾಡಿಕೊಳ್ಳಬೇಕಿದೆ, ನಕಾರಾತ್ಮಕ ರಾಜಕೀಯ, ದೋಷಾರೋಪಣೆಯ ರಾಜಕೀಯವನ್ನು ಜನರು ತಿರಸ್ಕರಿಸುತ್ತಿದ್ದಾರೆ. ಮೋದಿ ಸರ್ಕಾರದಲ್ಲಿ ಜನತೆಗೆ ವಿಶ್ವಾಸ ಕಡಿಮೆಯಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!