ದೇಶ

ಪ್ರಧಾನಿ ಮೋದಿ ಒಡೆದು ಆಳುವ ನೀತಿ ನಂಬಿದ್ದಾರೆ: ಗುಜರಾತ್ ಪ್ರತಿಭಟನೆ ಬಗ್ಗೆ ರಾಹುಲ್ ಗಾಂಧಿ ಟೀಕೆ

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಒಡೆದು ಆಳುವ ನೀತಿಯಲ್ಲೇ ನಂಬಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಒಡೆದು ಆಳುವ ನೀತಿಯಲ್ಲೇ ನಂಬಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಗುಜರಾತ್ ನಲ್ಲಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಮೋದಿ ದೇಶವನ್ನು ಒಡೆದು ಆಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯುಪಿಎ ಸರ್ಕಾರ ದೇಶವನ್ನು ಒಗ್ಗೂಡಿಸುವ ಮನಸ್ಥಿತಿ ಹೊಂದಿತ್ತು. ಆದರೆ ಮೋದಿ ಸರ್ಕಾರ ಒಡೆದು ಆಳುವ ಮನಸ್ಥಿತಿ ಹೊಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 
ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ-ಪಿಡಿಪಿ ಮೈತ್ರಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಯುಪಿಎ ಸರ್ಕಾರ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ಸಹಕಾರ ನೀಡಿತ್ತು. ಆದರೆ ಪ್ರಸ್ತುತ ಇರುವುದು ಅವಕಾಶವಾದಿ ಮೈತ್ರಿಯಾಗಿದ್ದು ಅಭಿವೃದ್ಧಿ ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಕಾಶ್ಮೀರಕ್ಕೆ ಭೇಟಿ ನೀಡಿರುವುದು ಸಂತಸ ಹಾಗೂ ದುಃಖ ಎರಡನ್ನೂ ಉಂಟುಮಾಡುತ್ತಿದೆ. ಕಾಶ್ಮೀರ ನನ್ನ ಪೂರ್ವಜರ ಭೂಮಿ ಎಂಬುದಕ್ಕೆ ಸಂತಸವಾಗುತ್ತಿದೆ. ಇಲ್ಲಿನ ಜನರು ಅನೇಕ ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿರುವುದಕ್ಕೆ ನೋವಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.  
ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿರ್ನಾಮಗೊಳಿಸಲು ಯುಪಿಎ ಸರ್ಕಾರ ಕ್ರಮ ಕೈಗೊಂಡಿತ್ತು. ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಯುಪಿಎ ಸರ್ಕಾರ 900 ಕೋಟಿ ಅನುದಾನ ನೀಡಿತ್ತು. ಇಲ್ಲಿನ ಸ್ಥಳೀಯ ಯುವಕರಿಗೆ ಯುಪಿಎ ಸರ್ಕಾರ ಉದ್ಯೋಗಾವಕಾಶ ನೀಡಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!