ಒಆರ್ ಒಪಿ ಪ್ರತಿಭಟನೆ: 
ದೇಶ

ಒಆರ್ ಒಪಿ ಪ್ರತಿಭಟನೆ: ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಿರುವ ನಿವೃತ್ತ ಸೈನಿಕರು

ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಗೆ ನಿರಾಕರಿಸಿದ್ದ ಪ್ರತಿಭಟನಾ ನಿರತ ನಿವೃತ್ತ ಸೈನಿಕರು ಈಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಲು ನಿರ್ಧರ್ಸಿದ್ದಾರೆ.

ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿರುವ ನಿವೃತ್ತ ಸೈನಿಕರು ಇಂದು ರಾತ್ರಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ಹಿಂದೆಯೂ ಹಲವು ಬಾರಿ ನಿವೃತ್ತ ಯೋಧರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿತ್ತು.  ಆದರೆ ಪ್ರತಿಭಟನಾ ನಿರತರು ಮಾತ್ರ ತಿರಸ್ಕರಿಸಿದ್ದರು.

ಆಮರಣಾಂತ ಉಪವಾಸ ನಿಲ್ಲಿಸುವಂತೆ ಪ್ರಧಾನಿ ಕಾರ್ಯಾಲಯವೂ ಮನವಿ ಮಾಡಿತ್ತು. ಹಲವು ದಿನಗಳಿಂದ ನಿವೃತ್ತ ಯೋಧರು ಒ.ಆರ್.ಒ.ಪಿ ಗೆ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದರು. ದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಸಚಿವರ ನಿವಾಸದಲ್ಲಿ ನಿವೃತ್ತ ಸೈನಿಕರ ಪ್ರತಿನಿಧಿ ಹಾಗೂ ರಕ್ಷಣಾ ಸಚಿವರು ಇಂದು ರಾತ್ರಿ ನಡೆಸಲಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ