ಪ್ರಧಾನಿ ನರೇಂದ್ರ ಮೋದಿ 
ದೇಶ

ವಾಜಪೇಯಿ ಮಾದರಿ ಮೋದಿಯೂ ಪಾಕ್ ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿ: ಪಿಡಿಪಿ

ನರೇಂದ್ರ ಮೋದಿ ಸರ್ಕಾರ ವಾಜಪೇಯಿ ಅವರಂತೆಯೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಆಡಳಿತ ಪಕ್ಷ ಪಿಡಿಪಿ,  ಮೋದಿ ಸರ್ಕಾರ ವಾಜಪೇಯಿ ಅವರಂತೆಯೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಎನ್ ಡಿಎ ಸರ್ಕಾರ, ಕದನ ವಿರಾಮ ಉಲ್ಲಂಘನೆ ಬಗ್ಗೆ ಪಾಕಿಸ್ತಾನದೊಂದಿಗೆ ಸೌಹಾರ್ದಯುತವಾದ ಒಪ್ಪಂದ ಮಾಡಿಕೊಂಡ ರೀತಿಯಲ್ಲೇ ಮೋದಿ ಸರ್ಕಾರವೂ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪಿಡಿಪಿ ನಾಯಕ, ವಿಧಾನ  ಪರಿಷತ್ ನಾಯಕ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

2003 ರ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ್ ಉಲ್ಲಂಘನೆ ಮಾಡುತ್ತಿರುವುದಕ್ಕೆ ವಿಕ್ರಮಾದಿತ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ದಾಳಿಗೆ ಮೃತಪಟ್ಟ ಮೂವರು ನಾಗರಿಕರ ಕುಟುಂಬಗಳಿಗೆ ಪಿಡಿಪಿ ನಾಯಕ ಸಂತಾಪ ಸೂಚಿಸಿದ್ದಾರೆ.

ಮಾನವೀಯ ದೃಷ್ಟಿಯಿಂದ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಮಾತುಕತೆಯನ್ನು ಮುಂದುವರೆಸಬೇಕೆಂದು ವಿಕ್ರಮಾದಿತ್ಯ ಸಿಂಗ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!