ಪ್ರಧಾನಿ ನರೇಂದ್ರ ಮೋದಿ ಹಾಗೂ ಮೇಜರ್ ಧ್ಯಾನ್ ಚಂದ್(ಸಂಗ್ರಹ ಚಿತ್ರ) 
ದೇಶ

ಇಂದು ರಾಷ್ಟ್ರೀಯ ಕ್ರೀಡಾ ದಿನ: ಧ್ಯಾನ್ ಚಂದ್ ಗೆ ಪ್ರಧಾನಿ ನಮನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ 110ನೇ ಹುಟ್ಟುಹಬ್ಬದ ಅಂಗವಾಗಿ ಗೌರವ ನಮನ ಸಲ್ಲಿಸಿದ್ದು...

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ 110ನೇ ಹುಟ್ಟುಹಬ್ಬದ ಅಂಗವಾಗಿ ಗೌರವ ನಮನ ಸಲ್ಲಿಸಿದ್ದು, ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ದೇಶದ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ್ದಾರೆ.

ಧ್ಯಾನ್ ಚಂದ್ ಹುಟ್ಟುಹಬ್ಬ ದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನಮ್ಮ ದೇಶದ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರಲ್ಲಿ ಇನ್ನಷ್ಟು ಚೈತನ್ಯ ಹೆಚ್ಚಾಗಲಿ ಎಂದು ಆಶಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಲವು ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತಿದೆ.

ಆದಸ್ಟ್ 29, 1905ರಲ್ಲಿ ಜನಿಸಿದ್ದ ಧ್ಯಾನ್ ಚಂದ್ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲಾಗುತ್ತದೆ. ಅವರು ಭಾರತಕ್ಕೆ ಮೂರು ಬಾರಿ 1928, 1932 ಮತ್ತು 1936ರ ಒಲಿಂಪಿಕ್ಸ್ ನಲ್ಲಿ ಚಿನ್ನ ತಂದುಕೊಟ್ಟಿದ್ದರು.  ಚೆಂಡನ್ನು ನಿಭಾಯಿಸುತ್ತಿದ್ದ ರೀತಿಯಿಂದ ಮಾಂತ್ರಿಕ ಎಂದು ಕರೆಯಲಾಗುತ್ತಿತ್ತು.ಧ್ಯಾನ್ ಚಂದ್ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದು 1948ರಲ್ಲಿ. ಅವರು ತಮ್ಮ ವೃತ್ತಿ ಜೀವನದಲ್ಲಿ 400 ಗೋಲುಗಳನ್ನು ಗಳಿಸಿದ್ದರು.

ಮೇಜರ್ ಧ್ಯಾನ್ ಚಂದ್ 1979, ಡಿಸೆಂಬರ್ 3ರಂದು ಸಾವನ್ನಪ್ಪಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT