ಒನ್ ರ್ಯಾಂಕ್ ಒನ್ ಪೆನ್ಷನ್ ಪ್ರತಿಭಟನೆ(ಸಂಗ್ರಹ ಚಿತ್ರ) 
ದೇಶ

ಒಆರ್ ಒಪಿ ಪ್ರತಿಭಟನೆ: ಅಸ್ವಸ್ಥಗೊಂಡ ನಿವೃತ್ತ ಸೈನಿಕರ ಸಂಖ್ಯೆ 5 ಕ್ಕೆ ಏರಿಕೆ

ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದ ನಿವೃತ್ತ ಯೋಧರೊಬ್ಬರು ಅಸ್ವಸ್ಥಗೊಂಡಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಕೈಗೊಂಡಿದ್ದ ನಿವೃತ್ತ ಯೋಧರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಈ ವರೆಗೂ 5 ನಿವೃತ್ತ ಯೋಧರು ಅಸ್ವಸ್ಥಗೊಂಡಿದ್ದಾರೆ. 

ಆಮರಣಾಂತ ಉಪವಾಸ ಕೈಗೊಂಡಿರುವ ಯೋಧರ ಪೈಕಿ ಈ ವರೆಗೂ ನಾಲ್ಕು ನಿವೃತ್ತ ಸೈನಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಆರ್ ಒಪಿಗಾಗಿ ಆಗ್ರಹಿಸುತ್ತಿರುವ ಸೈನಿಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಯೋಜನೆ ಜಾರಿಗೆ ಇನ್ನಷ್ಟು ಸಮಯ ಬೇಕಾಗುತ್ತದೆ. ಒಆರ್ ಒಪಿ ಜಾರಿಗೆ ಎದುರಾಗಿರುವ ಅಡ್ಡಿಗಳನ್ನು ಸರಿಪಡಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಒಆರ್ ಒಪಿ ಯೋಜನೆ ಜಾರಿಗೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ  ಯೋಜನೆ ಜಾರಿಯಾಗಲಿದೆ ಎಂದು ರಕ್ಷಣಾ ಸಚಿವರು ಭರವಸೆ ನೀಡಿದ್ದರು. ಇದಾದ ಬಳಿಕ ನಿವೃತ್ತ ಸೈನಿಕರ ನಿಯೋಗ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ  ಶೀಘ್ರವೇ ಯೋಜನೆ ಜಾರಿ ಮಾಡುವುದಕ್ಕೆ ಒತ್ತಾಯಿಸಿದ್ದರು.  ಆದರೆ ಈ ವರೆಗೂ ಯೋಜನೆ ಜಾರಿಯಾಗದೆ ಇರುವುದರ ಹಿನ್ನೆಲೆಯಲ್ಲಿ ಯೋಧರು ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ