ಹಾರ್ದಿಕ್ ಪಟೇಲ್(ಸಂಗ್ರಹ ಚಿತ್ರ) 
ದೇಶ

ಪಟೇಲ್ ಸಮುದಾಯಕ್ಕೆ ಮೀಸಲಾತಿ: ದೇಶಾದ್ಯಂತ ಪ್ರತಿಭಟನೆಗೆ ಹಾರ್ದಿಕ್ ಪಟೇಲ್ ಸಜ್ಜು

ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಪ್ರತಿಭಟನೆ ಸ್ವರೂಪವನ್ನು ದೇಶಾದ್ಯಂತ ತೀವ್ರಗೊಳಿಸುತ್ತಿರುವ ಹಾರ್ದಿಕ್ ಪಟೇಲ್...

ನವದೆಹಲಿ: ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಪ್ರತಿಭಟನೆ ಸ್ವರೂಪವನ್ನು ದೇಶಾದ್ಯಂತ ತೀವ್ರಗೊಳಿಸುತ್ತಿರುವ ಹಾರ್ದಿಕ್ ಪಟೇಲ್, ತಮ್ಮ ಪ್ರತಿಭಟನೆ ವೇಳೆ ಯಾವುದೇ ರಾಜಕೀಯ ಪಕ್ಷಗಳು ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ನಾವಿಲ್ಲಿ ಯಾವುದೇ ಸಚಿವರನ್ನು ಭೇಟಿ ಮಾಡುವುದಿಲ್ಲ. ರಾಜಕೀಯ ಪಕ್ಷವನ್ನು ಸ್ವಾಗತಿಸುವುದಿಲ್ಲ ಎಂದು ದೆಹಲಿಯಲ್ಲಿಂದು ಹೇಳಿದ್ದಾರೆ.ಇಂದು ಅಪರಾಹ್ನ ಮಾಧ್ಯಮವನ್ನುದ್ದೇಶಿಸಿ ಮಾತನಾಡಲಿರುವ ಅವರು, ಪಟೇಲ್ ಸಮುದಾಯದ ಕೇವಲ ಶೇಕಡಾ 5ರಿಂದ 10ರಷ್ಟು ಜನರು ಮಾತ್ರ ಆರ್ಥಿಕವಾಗಿ ಸಬಲರಾಗಿದ್ದಾರೆ. ಅದಕ್ಕಾಗಿ ಆ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ. ಈ ಪ್ರತಿಭಟನೆಯನ್ನು ದೇಶದ ಪ್ರತಿ ಮೂಲೆ ಮೂಲೆಗೆ ಕೊಂಡೊಯ್ಯಲಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು. ನಮ್ಮ ಪ್ರತಿಭಟನೆಗೆ ಜಾಟ್ ಮತ್ತು ಗುರ್ಜರ್ ಸಮುದಾಯದ ಬೆಂಬಲವನ್ನು ಕೋರುತ್ತಿದ್ದೇವೆ ಎಂದು ಹೇಳಿದರು.

ತಮ್ಮ ಪ್ರತಿಭಟನೆಯನ್ನು ಇಲ್ಲಿಗೇ ನಿಲ್ಲಿಸುವುದಿಲ್ಲ, ಇದು ವರ್ಷಗಳವರೆಗೆ ಮುಂದುವರಿಯಬಹುದು. ಇಡೀ ದೇಶದಲ್ಲಿ ಪಟೇಲ್ ಸಮುದಾಯದವರು 27 ಕೋಟಿ ಜನ  ಇದ್ದಾರೆ. ಅವರೆಲ್ಲರನ್ನೂ ಒಟ್ಟುಗೂಡಿಸಿ ಈ ಪ್ರತಿಭಟನೆಗೆ ಸೇರಿಸಬೇಕು. ಅದಕ್ಕಾಗಿ ದೇಶಾದ್ಯಂತ ಪ್ರಚಾರ ನಡೆಸುತ್ತೇವೆ ಎಂದು ಹಾರ್ದಿಕ್ ಪಟೇಲ್ ಮಾಧ್ಯಮಗಳಿಗೆ ತಿಳಿಸಿದರು.

ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಮಾಜಿ ಯೋಧರ ಪ್ರತಿಭಟನೆ ಸ್ಥಳಕ್ಕೆ ತೆರಳಿ ಹಾರ್ದಿಕ್ ಪಟೇಲ್ ಮಾತುಕತೆ ನಡೆಸುತ್ತಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ ಅವರು, ತಾವು ಜಾಟ್ ಸಮುದಾಯವನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದು, ಅಗತ್ಯಬಿದ್ದರೆ ಜಂತರ್ ಮಂತರ್ ಗೆ ಹೋಗುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT