ಜಮ್ಮು-ಕಾಶ್ಮೀರ 
ದೇಶ

ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಫೋಟಕ ಪತ್ತೆ

ಜಮ್ಮು-ಕಾಶ್ಮೀರದ ಉದ್ಧಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾರ ಪ್ರಮಾಣದ ಸ್ಪೋಟಕ ಸಾಮಗ್ರಿಗಳು ಪತ್ತೆಯಾಗಿದ್ದು ಸಿಆರ್ ಪಿಎಫ್ ಯೋಧರು ಸ್ಪೋಟಕಗಳನ್ನು ವಶಪಡಿಸಿಕೊಂದಿದ್ದಾರೆ.

ಜಮ್ಮು:  ಜಮ್ಮು-ಕಾಶ್ಮೀರದ ಉದ್ಧಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾರ ಪ್ರಮಾಣದ ಸ್ಪೋಟಕ ಸಾಮಗ್ರಿಗಳು ಪತ್ತೆಯಾಗಿದ್ದು ಸಿಆರ್ ಪಿಎಫ್ ಸಿಬ್ಬಂದಿ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.  

ಸ್ಪೋಟಕ್ಕೆ ಬಲಸಲಾಗುವ ಟಿ.ಎನ್.ಟಿ ಸ್ಲಾಬ್ ನ್ನು ವಶಪಡಿಸಿಕೊಂಡಿರುವ ಪೊಲೀಸರು, ಹೆದ್ದಾರಿ ತೆರವು ಮಾಡಿದ ಬಳಿಕ ಇದನ್ನು ಹಾಗೇ ಬಿಟ್ಟು ಹೋಗಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರ ಹೆದ್ದಾರಿ ಭೂಕುಸಿತ ಪೀಡಿತ ಪ್ರದೇಶವಾಗಿರುವುದರಿಂದ ತೆರವುಗೊಳಿಸಲು ಟಿಎನ್ ಟಿ ಸ್ಲಾಬ್ ಗಳನ್ನು ಬಳಸುತ್ತಾರೆ.

ಕಾಶ್ಮೀರ ಕಣಿವೆಗೆ ಭಾರತದೊಂದಿಗೆ ಸಂಪರ್ಕ ಕಲ್ಪಿಸಲು ಇರುವ ಒಂದೇ ಮಾರ್ಗ ಜಮ್ಮು-ಶ್ರೀನಗರ ಹೆದ್ದಾರಿಯಾಗಿದೆ, ಈ ಪ್ರದೇಶದಲ್ಲೇ ಸ್ಪೋಟಕ ಪತ್ತೆಯಾಗಿದ್ದು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!