ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಚೆನ್ನೈ ಹವಾಮಾನ ಇಲಾಖೆ
ಜಲಪ್ರಳಯದಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ...
ಚೆನ್ನೈ: ಜಲಪ್ರಳಯದಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ಪುದುಚೆರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಿದೆ.
ತಮಿಳುನಾಡಿನ ಉತ್ತರ ಜಿಲ್ಲೆಗಳಾದ ಚೆನ್ನೈ, ತಿರುವಲ್ಲೂರ್ ಮತ್ತು ಕಂಚೀಪುರಂ ನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.48 ಗಂಟೆಗಳ ನಂತರ ಪರಿಸ್ಥಿತಿ ಸುಧಾರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಲ್ ಎಸ್ ರಾಥೋರ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.