ನೇಪಾಳ ವಿದೇಶಾಂಗ ಸಚಿವ ಕಮಲ್ ಥಾಪಾ- ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ದೇಶ

ರಾಜಕೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಿ: ನೇಪಾಳಕ್ಕೆ ಭಾರತದ ಸಲಹೆ

ರಾಜಕೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ನೇಪಾಳಕ್ಕೆ ಭಾರತ ಮತ್ತೊಮ್ಮೆ ಸಲಹೆ ನೀಡಿದೆ.

ನವದೆಹಲಿ: ನೇಪಾಳದಲ್ಲಿ ಜಾರಿಯಾಗಿರುವ ಹೊಸ ಸಂವಿಧಾನದ ಅಂಶಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಿಂದ ಉಂಟಾಗಿದ್ದ ಸಮಸ್ಯೆಗಳು ಮುಂದುವರೆದಿದ್ದು ರಾಜಕೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಭಾರತ ಮತ್ತೊಮ್ಮೆ ಸಲಹೆ ನೀಡಿದೆ.
ನವದೆಹಲಿಯಲ್ಲಿ ನೇಪಾಳದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಕಮಲ್ ಥಾಪಾ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದು, ನೇಪಾಳ ಎದುರಿಸುತ್ತಿರುವ ರಾಜಕೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಹೊಸ ಸಂವಿಧಾನದಲ್ಲಿ ಮದೇಸಿ ಜನಾಂಗವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ನೇಪಾಳ- ಭಾರತ ಗಡಿ ಪ್ರದೇಶಹ್ದಲ್ಲಿರುವ ಮದೇಸಿ ಸಮುದಾಯದವರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಗಡಿ ಪ್ರದೇಶದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುವಂತೆ ಮಾಡಿದೆ. ಪ್ರತಿಭಟನೆಯ ಪರಿಣಾಮ ಭಾರತದಿಂದ ನೇಪಾಳಕ್ಕೆ ಹೋಗಬೇಕಿರುವ ಅಗತ್ಯ ಸಾಮಗ್ರಿಗಳು ತಲುಪುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನೇಪಾಳ ನಾಯಕರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದು  ಮಾತುಕತೆ ನಡೆಸಿದ್ದಾರೆ.
ನೆಪಾಳಕ್ಕೆ ಅಗತ್ಯ ಸರಕುಗಳನ್ನು ಪೂರೈಕೆ ಮಾಡಲು ಭಾರತ ಸಿದ್ಧವಿದೆ. ಆದರೆ ನೇಪಾಳ ತನ್ನ ರಾಜಕೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಬೇಕು ಎಂದು ಸುಷ್ಮಾ ಸ್ವರಾಜ್ ಭೇಟಿ ವೇಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!