(ಸಾಂದರ್ಭಿಕ ಚಿತ್ರ) 
ದೇಶ

ಅಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಬೇಡ: ಆರ್‌ಎಸ್‌ಎಸ್'ಗೆ ಶಿವಸೇನೆ ಎಚ್ಚರಿಕೆ

ಬಹು ಚರ್ಚಿತ ಅಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡಬಾರದೆಂದು ಆರ್‌ಎಸ್‌ಎಸ್'ಗೆ ಶಿವಸೇನೆ ಗುರುವಾರ ಎಚ್ಚರಿಕೆ ನೀಡಿದೆ...

ನವದೆಹಲಿ: ಬಹು ಚರ್ಚಿತ ಅಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ರಾಜಕೀಯ ಮಾಡಬಾರದೆಂದು ಆರ್‌ಎಸ್‌ಎಸ್'ಗೆ ಶಿವಸೇನೆ ಗುರುವಾರ ಎಚ್ಚರಿಕೆ ನೀಡಿದೆ.

ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ರಾಮ ದೇಗುಲ ನಿರ್ಮಾಣ ಮಾಡಬೇಕೆಂಬ ಇಚ್ಛೆ ನಮಗೂ ಇದೆ. ಆದರೆ ಅದಕ್ಕೆ ಸಮಯ ಕೂಡಿ ಬರಬೇಕಿದೆ. ರಾಮ ದೇಗುಲ ಕುರಿತ ವಿಚಾರವನ್ನು ಉತ್ತರಪ್ರದೇಶದ ಚುನಾವಣೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ರಾಮ ದೇಗುಲ ವಿಚಾರವನ್ನು ರಾಜಕೀಯ ಮಾಡಬಾರದು. ವಿಚಾರವನ್ನು ರಾಜಕೀಯ ಮಾಡಿದರೆ ಜನರು ನಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

1990ರಲ್ಲಿ ಕರ್ ಸೇವಾ (ಯಾತ್ರಿಕರ ಮುಫತ್ತಾದ ಸೇವೆ ಹಾಗೂ ಕೆಲಸ)ದಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಸಹೋದರರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಅವರಿಗೆ ಗೌರವ ಸಲ್ಲಿಸುವ ಸಲ್ಲಿಸುವುದಕ್ಕಾಗಿ ನಿನ್ನೆ ಕೋಲ್ಕತಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರು, ಅಯೋಧ್ಯೆ ರಾಮಮಂದಿರ ನಿರ್ಮಾಣ ಕುರಿತಂತೆ ಮಾತನಾಡಿದ್ದರು.

ರಾಮ ದೇಗುಲ ನಾವು ಬದುಕಿದ್ದ ಅವಧಿಯಲ್ಲೇ ನಿರ್ಮಾಣವಾಗಬೇಕಿದೆ. ದೇಗುಲವನ್ನು ನೋಡಿ ಕಣ್ತುಂಬಿಕೊಳ್ಳಬೇಕು. ಆದರೆ, ದೇಗುಲ ಯಾವಾಗ ಮತ್ತು ಹೇಗೆ ನಿರ್ಮಾಣವಾಗುತ್ತದೆ ಎಂಬುದರ ಬಗ್ಗೆ ಯಾರೊಬ್ಬರು ಮಾತನಾಡುತ್ತಿಲ್ಲ. ಆದರೆ ಈ ಬಗ್ಗೆ ನಾವು ಸದಾಕಾಲ ಎಚ್ಚರಿಕೆಯಿಂದ ಹಾಗೂ ತಯಾರಾಗಿರಬೇಕಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ