ಕುಟುಂಬ ಯೋಜನೆ ಬಗ್ಗೆ ಮುಸ್ಲಿಂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಆರ್ ಎಸ್ಎಸ್ ಅಭಿಯಾನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮುಸ್ಲಿಂ ಮಹಿಳೆಯರಲ್ಲಿ ಕುಟುಂಬ ಯೋಜನೆ ಕುರಿತು ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ.
ಅಜ್ಮೀರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮುಸ್ಲಿಂ ಮಹಿಳೆಯರಲ್ಲಿ ಕುಟುಂಬ ಯೋಜನೆ ಕುರಿತು ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ.
ಸಮಾನ ನಾಗರಿಕ ಸಂಹಿತೆ ಜಾರಿಗೆ ಒತ್ತಾಯಿಸುತ್ತಿರುವ ಆರ್ ಎಸ್ ಎಸ್, ಚಿಕ್ಕ ಕುಟುಂಬದ ಮಹತ್ವ, ವಿದ್ಯಾಭ್ಯಾಸ ಕುರಿತ ವಿಷಯಗಳ ಬಗ್ಗೆ ದೇಶಾದ್ಯಂತ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ಮುಸ್ಲಿಂ ಮಹಿಳೆಯರಲ್ಲಿ ಕುಟುಂಬ ಯೋಜನೆ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶ.
ರಾಜಸ್ಥಾನದಿಂದ ಈ ಅಭಿಯಾನ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಇದನ್ನು ದೇಶಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ. 5 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಆರ್ಎಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ತಿಳಿಸಿದ್ದಾರೆ. ಉತ್ತಮ ಶಿಕ್ಷಣ ನೀಡುವುದರ ಬಗ್ಗೆ ಇಸ್ಲಾಮ್ನ ಪವಿತ್ರ ಗ್ರಂಥ ಖುರಾನ್ನಲ್ಲಿ ಹೇಳಿರುವ ಬಗ್ಗೆಯೂ ಜಾಗೃತಿ ಮೂಡಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.