ಪಾಟ್ನ: ಮೈಕ್ರೋಸಾಫ್ಟ್ ಸಂಸ್ಥಾಪಕ ಹಾಗೂ ಜಗತ್ತಿನ ಶ್ರೀಮಂತ ವ್ಯಕ್ತಿಗಳಲ್ಲೊಬ್ಬರಾದ ಬಿಲ್ ಗೇಟ್ಸ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿರುವ ಬಿಲ್ ಗೇಟ್ಸ್ ಅವರು, ಈಗಾಗಲೇ ಆರೋಗ್ಯ, ಶಿಕ್ಷಣ, ಮಾನವ ಅಭಿವೃದ್ಧಿ ಹಾಗೂ ಇನ್ನಿತರೆ ಕ್ಷೇತ್ರಗಳ ಕುರಿತಂತೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಬಿಲ್ ಗೇಟ್ಸ್ ಅವರು ಬಿಹಾರದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಇನ್ನಿತರೆ ಕ್ಷೇತ್ರ ಕುರಿತಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಉಪಕ್ರಮಕ್ಕೆ ಕುರಿತಂತೆ ಮೆಚ್ಚಿಗೆ ವ್ಯಕ್ತಪಡಿಸಿದ್ದು, ಬಿಹಾರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆಂದು ತಿಳಿದುಬಂದಿದೆ.