ಪ್ಯಾರಿಸ್ ನಲ್ಲಿ ನಡೆದ ಹವಾಮಾನ ಬದಲಾವಣೆ ಶೃಂಗಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರು ಮಾತನಾಡುತ್ತಿರುವ ಚಿತ್ರ 
ದೇಶ

ಪರಸ್ಪರ ವಿಶ್ವಾಸದಿಂದ ಭಾರತ-ಪಾಕಿಸ್ತಾನ ಸಮಸ್ಯೆ ಬಗೆಹರಿಸಿಕೊಳ್ಳಬೇಕು: ಸಿಪಿಐ

ಭಾರತ-ಪಾಕಿಸ್ತಾನ ಪರಸ್ಪರ ಮಾತುಕತೆ ಮತ್ತು ವಿಶ್ವಾಸದಿಂದ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಸಿಪಿಐ ಶನಿವಾರ ಹೇಳಿದೆ...

ನವದೆಹಲಿ: ಭಾರತ-ಪಾಕಿಸ್ತಾನ ಪರಸ್ಪರ ಮಾತುಕತೆ ಮತ್ತು ವಿಶ್ವಾಸದಿಂದ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಸಿಪಿಐ ಶನಿವಾರ ಹೇಳಿದೆ.

ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ನವಾಜ್ ಶರೀಫ್ ಮಾತುಕತೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಪಿಐ ನಾಯಕ ಡಿ.ರಾಜ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನು ಭೇಟಿ ಮಾಡಿ ಮಾತನಾಡಿರುವುದೊಂದು ಧನಾತ್ಮಕ ಬೆಳವಣಿಗೆಯಾಗಿದೆ. ಇದಲ್ಲದೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇದೀಗ ಪಾಕಿಸ್ತಾನಕ್ಕೆ ಹೋಗುತ್ತಿರುವುದೂ ಸಹ ಉತ್ತಮ ಬೆಳವಣಿಗೆ. ಭಾರತ ಮತ್ತು ಪಾಕಿಸ್ತಾನ ನೆರೆ ರಾಷ್ಟ್ರಗಳಾಗಿದ್ದು, ನೆರೆ ರಾಷ್ಟ್ರದೊಂದಿಗೆ ಉತ್ತಮ ವಾತಾವರಣ ಹಾಗೂ ಸಂಬಂಧವಿರಬೇಕು. ಘರ್ಷಣೆಗಳನ್ನು ಧೀರ್ಘಕಾಲಿಕವಾಗಿ ಮುಂದುವರೆಸಿಕೊಂಡು ಹೋಗಬಾರದು. ಎರಡೂ ದೇಶಗಳು ಪರಸ್ಪರ ವಿಶ್ವಾಸದಿಂದ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ದ್ವಿಪಕ್ಷೀಯ ಸಂಬಂಧ ಪರಸ್ಪರ ಮಾತುಕತೆ ಹಾಗೂ ಉತ್ತಮ ಸಂಬಂಧದಿಂದ ಉಂಟಾಗಲಿದೆ. ಇದೀಗ ಎರಡು ರಾಷ್ಟ್ರಗಳ ಮಧ್ಯೆ ಧನಾತ್ಮಕ ಬೆಳವಣಿಗೆಗಳುಂಟಾಗುತ್ತಿದ್ದು, ಮುಂದಿನ ಪ್ರಕ್ರಿಯೆಯಲ್ಲೂ ಇದೇ ರೀತಿಯ ಬೆಳವಣಿಗೆಯನ್ನು ಭಾರತ ಸರ್ಕಾರ ಮುಂದುವರೆಸಲಿದೆ ಎಂಬುದರ ಬಗ್ಗೆ ನನಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಪ್ರಾರಿಸ್ ನಲ್ಲಿ ನಡೆದ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನು ಭೇಟಿ ಮಾಡಿದ್ದರು. ಸಮ್ಮೇಳನ ಆರಂಭವಾಗುವುದಕ್ಕೂ ಮುನ್ನ ಇಬ್ಬರೂ ನಾಯಕರು ಹಸ್ತಲಾಘವ ಮಾಡಿದ್ದರು.

ಇದೀಗ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಡಿಸೆಂಬರ್ 7 ಪಾಕಿಸ್ತಾನಕ್ಕೆ ತೆರಳಲಿದ್ದಾರೆಂದು ಹೇಳಲಾಗುತ್ತಿದೆ. ಆಫ್ಘಾನಿಸ್ತಾನ ಸಂಬಂಧ ಪ್ರಾದೇಶಿಕ ಸಹಕಾರ ಕುರಿತ ಚರ್ಚೆ ನಡೆಸಲು 14 ರಾಷ್ಟ್ರಗಳ ಸಚಿವರು ಪಾಕಿಸ್ತಾನದಲ್ಲಿ ಡಿ.8 ರಂದು ಸಭೆ ಸೇರಲಿದ್ದಾರೆಂದು ಹೇಳಲಾಗುತ್ತಿದ್ದು, ಈ ಸಭೆಯಲ್ಲಿ ಭಾಗವಹಿಸುವಂತೆ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಆಹ್ವಾನ ಬಂದಿದೆ. ಈ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನಕ್ಕೆ ತೆರಳಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT